ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

Hosanagara JMFC Judge Maruthi Shinde personally intervenes to help a school dropout girl return to school, setting an inspiring example of humanitarian public service.

ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸವಲ್ಲ, ಅದು ಅಂಧಕಾರವನ್ನು ಹೋಗಲಾಡಿಸಿ ಬದುಕನ್ನು ಬೆಳಗುವ ದಿವ್ಯ ಜ್ಯೋತಿ. ಈ ಜ್ಯೋತಿಯಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಮಹದಾಸೆಯೊಂದಿಗೆ, ನ್ಯಾಯದಾನ ಮಾಡುವ ಕೈಗಳೇ ಇದೀಗ ಓರ್ವ ವಿದ್ಯಾರ್ಥಿನಿಯ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸಿದ ಅಪರೂಪದ ಹಾಗೂ ಅತ್ಯಂತ ಪ್ರೇರಣಾದಾಯಕ ಘಟನೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಾಕ್ಷಿಯಾಗಿದೆ.

​ಹೊಸನಗರ ತಾಲೂಕಿನ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಮ್ಮ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹೊರಗುಳಿದಿದ್ದಳು. ಹಲವು ಅಧಿಕಾರಿಗಳು ಮಗುವನ್ನು ಮರಳಿ ಶಾಲೆಗೆ ಕರೆತರಲು ಅನೇಕ ಬಾರಿ ಪ್ರಯತ್ನಿಸಿದರೂ ಸಫಲರಾಗಿರಲಿಲ್ಲ. ಮಗುವಿನ ಉಜ್ವಲ ಭವಿಷ್ಯ ಕಮರಿಹೋಗುವ ಆತಂಕ ಎದುರಾಗಿತ್ತು.

ಆದರೆ, ಶುಕ್ರವಾರ ಮಸಗಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ಮಾನ್ಯ ಪ್ರಧಾನ ನ್ಯಾಯಾಧೀಶರಾದ ಮಾರುತಿ ಶಿಂಧೆ ಅವರ ಗಮನಕ್ಕೆ ಹೊಸನಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಗಾಯತ್ರಿ ಕೆ. ಜಿ ಈ ವಿಚಾರವನ್ನು ತಂದರು. ವಿಷಯ ತಿಳಿದ ತಕ್ಷಣವೇ ಸ್ಪಂದಿಸಿದ ನ್ಯಾಯಾಧೀಶರು, ಕೇವಲ ಆದೇಶ ನೀಡಿ ಸುಮ್ಮನಾಗಲಿಲ್ಲ; ಬದಲಾಗಿ ಸಮಾಜದ ಮೇಲಿನ ನೈಜ ಕಳಕಳಿಯಿಂದ ಖುದ್ದಾಗಿ ಫೀಲ್ಡಿಗಿಳಿದರು.

​ನೇರವಾಗಿ ವಿದ್ಯಾರ್ಥಿನಿಯ ಮನೆಗೆ ತೆರಳಿದ ನ್ಯಾಯಾಧೀಶರು, ಅತ್ಯಂತ ಪ್ರೀತಿ ಹಾಗೂ ಕಾಳಜಿಯಿಂದ ವಿದ್ಯಾರ್ಥಿನಿ ಮತ್ತು ಆಕೆಯ ಕುಟುಂಬದವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಶಿಕ್ಷಣದ ಅನಿವಾರ್ಯತೆ ಮತ್ತು ಮಹತ್ವವನ್ನು ಅವರಿಗೆ ಮನದಟ್ಟು ಮಾಡಿ, ಅವರ ಮನವೊಲಿಸುವಲ್ಲಿ ಸಂಪೂರ್ಣ ಯಶಸ್ವಿಯಾದರು. ಸತತ ಪ್ರಯತ್ನಗಳಿಂದಲೂ ಬಗೆಹರಿಯದಿದ್ದ ಸಮಸ್ಯೆಯೊಂದು, ನ್ಯಾಯಾಧೀಶರ ಒಂದು ಮಾನವೀಯ ಹೆಜ್ಜೆಯಿಂದ ಸುಖಾಂತ್ಯ ಕಂಡಿದೆ. ಇಂದು ಆ ವಿದ್ಯಾರ್ಥಿನಿ ಮತ್ತೆ ಶಾಲೆಯ ಮೆಟ್ಟಿಲೇರಲು ಅವರ ಈ ನಡೆ ಪ್ರಮುಖ ಕಾರಣವಾಗಿದೆ.

​ಈ ಸಂಧರ್ಭದಲ್ಲಿ ನ್ಯಾಯಾಧೀಶರೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕೆ. ಜಿ, ಸರ್ಕಾರಿ ಅಭಿಯೋಜಕ ಅರುಣ್ ಕುಮಾರ್ ಎಸ್. ಎಂ, ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪರಶುರಾಮ ಸರ್, ಪಿಡಿಒ ಪರಮೇಶ್ವರ ಬಿ. ಬಿ. ಹಾಗೂ ಇತರರು ಜೊತೆಯಾಗಿ ನಿಂತರು.

​ಅಧಿಕಾರ ಇರುವುದು ಕೇವಲ ಆಡಳಿತ ನಡೆಸಲಲ್ಲ, ಬದಲಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಒಳಿತನ್ನು ಮಾಡಲು ಎಂಬುದಕ್ಕೆ ನ್ಯಾಯಾಧೀಶರಾದ ಮಾರುತಿ ಶಿಂಧೆ ಅವರ ಈ ಕಾರ್ಯವೇ ಅತ್ಯುತ್ತಮ ಉದಾಹರಣೆ. ಸಮಾಜದ ಪ್ರತಿಯೊಬ್ಬರಿಗೂ ಹಾಗೂ ವ್ಯವಸ್ಥೆಯಲ್ಲಿರುವ ಪ್ರತಿಯೊಬ್ಬ ಜನಸೇವಕನಿಗೂ ಈ ಘಟನೆ ಸ್ಫೂರ್ತಿಯ ಚಿಲುಮೆಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

3 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

3 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 days ago