ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
Independence Day celebrations were held with patriotic fervour at mosques across Hosanagara taluk, with flag hoisting, national anthem and messages of unity
ಹೊಸನಗರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊಸನಗರ ತಾಲೂಕಿನಾದ್ಯಂತ ವಿವಿಧ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಸೀದಿ ಆವರಣಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಸೀದಿ ಆಡಳಿತ ಮಂಡಳಿ ಸದಸ್ಯರು, ಧಾರ್ಮಿಕ ಮುಖಂಡರು, ಸ್ಥಳೀಯರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಮುಖಂಡರು, ದೇಶದ ಏಕತೆ, ಅಖಂಡತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಹೇಳಿದರು.
ಮಕ್ಕಳು ಹಾಗೂ ಯುವಕರು ಉತ್ಸಾಹದಿಂದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಹಲವು ಮಸೀದಿಗಳಲ್ಲಿ ದೇಶಭಕ್ತಿ ಸಂದೇಶಗಳೊಂದಿಗೆ ಸ್ವಾತಂತ್ರ್ಯೋತ್ಸವಕ್ಕೆ ಮೆರುಗು ನೀಡಲಾಯಿತು.
ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ , ಮುಖಂಡರಾದ ಅರ್ ಎ ಚಾಬುಸಾಬ್ , ಆಸೀಫ್ ಭಾಷಾ ಹಾಗೂ ಇನ್ನಿತರರು ಇದ್ದರು
ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ” ಈ ದೇಶದ ಅನೇಕ ಮಹಾನ್ ನಾಯಕರುಗಳ ತ್ಯಾಗ ,ಬಲಿದಾನ, ಹೋರಾಟ ಮಾಡುವುದರ ಮೂಲಕ ಸ್ವಾತಂತ್ರ್ಯ ಲಭಿಸಿದೆ, ಮಹಾತ್ಮ ಗಾಂಧೀಜಿ, ನೆಹರು, ಮುಂತಾದ ನಾಯಕರುಗಳ ಕನಸಿನಂತೆ ಸಹೋದರತೆ ಭ್ರಾತೃತ್ವ ,ದೇಶದ ಐಕ್ಯತೆಗಾಗಿ ನಾವೆಲ್ಲರೂ ಜಾತಿ ಧರ್ಮಗಳೊಂದಿಗೆ, ಸೌಹಾರ್ದತೆಯನ್ನು ಬದುಕಬೇಕೆಂದು” ಸಮಾಜದ ಸದಸ್ಯರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಜನಾಬ್ ಎಚ್ ಅಬ್ದುಲ್ಲ, ಮೊಹಮ್ಮದ್ ಖಾನ್, ಹುಸೇನ್ ಸಾಬ್, ಶ್ರೀಯುತ ಜಯರಾಮ ಶೆಟ್ಟಿ, ಶ್ರೀಯುತ ಮಂಜುನಾಥ ಶೆಟ್ಟಿ ಮೊಹಮ್ಮದ್ ಅಸ್ಲಾಂ ಅಬ್ದುಲ್ ಖಾದರ್ ಮುಂತಾದವರು ಉಪಸ್ಥಿತರಿದ್ದರು.
ಹೊಸನಗರ ಪಟ್ಟಣದ ಬದ್ರಿಯಾ ಹಾಗೂ ಜಾಮೀಯ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಹೊಸನಗರ ಬದ್ರಿಯಾ ಜುಮ್ಮ ಮಸೀದಿ ಅಧ್ಯಕ್ಷರಾದ ಇಸಾಕ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು
ಹೊಸನಗರ ತಾಲೂಕಿನ ಜಯನಗರದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆವರಣದಲ್ಲಿ ಮಸೀದಿಯ ಧರ್ಮಗುರುಗಳು ಧ್ವಜಾರೋಹಣ ನೆರವೇರಿಸಿದರು.
ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಮಸೀದಿ ಸಮಿತಿ ಅಧ್ಯಕ್ಷರಾದ ಸಾಧಿಕ್ ಕಚ್ಚಿಗೆಬೈಲ್ ಧ್ವಜಾರೋಹಣ ನೆರವೇರಿಸಿದರು.
ಹೊಸನಗರ ತಾಲೂಕಿನ ನಗರದ ಸುಲ್ತಾನ್ ಜುಮ್ಮಾ ಮಸೀದಿಯ ಆವರಣದಲ್ಲಿ ಮಸೀದಿಯ ಧರ್ಮಗುರುಗಳಾದ ಅಶ್ರಫ್ ಇಮಾಮಿ ಧ್ವಜಾರೋಹಣ ನೆರವೇರಿಸಿದರು.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…