w
Headlines
Home » ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

Screenshot 2026 08 31 18 27 42 531 com.picsart.studio edit

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

Hosanagara PSI Shankar Gowda Patil has been transferred, while Santosh Bagoji has assumed charge as the new Police Sub-Inspector of Hosanagara Police Station.

ಹೊಸನಗರ : ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಆರ್. ರವಿಕಾಂತೇ ಗೌಡ ಅವರು ಆದೇಶ ಹೊರಡಿಸಿದ್ದಾರೆ.

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಶಂಕರ್ ಗೌಡ ಪಾಟೀಲ್ ಅವರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅವರು ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೀಗ ಅವರ ಸ್ಥಾನಕ್ಕೆ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಸಂತೋಷ್ ಬಾಗೋಜಿ ಅವರು ಹೊಸನಗರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ ಸಂತೋಷ್ ಬಾಗೋಜಿ ಅವರು ಈ ಹಿಂದೆ ಜಗಳೂರು, ಕುಮಾರಪಟ್ಟಣ, ಸಾಗರ ಹಾಗೂ ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹೊಂದಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈಗ ಹೊಸನಗರ ಪೊಲೀಸ್ ಠಾಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂತೋಷ್ ಬಾಗೋಜಿ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂಬ ನಿರೀಕ್ಷೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.