ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್
Big update on school and college holiday in Hosanagara Taluk. Holiday is likely only for Nagara Hobli due to heavy rainfall, while a final decision will be announced by the Tahsildar and BEO at 7 AM on August 3.
ಹೊಸನಗರ: ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ತಾಲೂಕಿನಾದ್ಯಂತ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ನಗರ ಹೋಬಳಿಯಲ್ಲಿ ಮಾತ್ರ ಮಳೆಯ ತೀವ್ರತೆ ಮುಂದುವರಿದಿದ್ದು, ರಿಪ್ಪನ್‌ಪೇಟೆ ಹಾಗೂ ಹೊಸನಗರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರ ಹೋಬಳಿಗೆ ಮಾತ್ರ ರಜೆ ಘೋಷಿಸುವ ಸಾಧ್ಯತೆ ಇದೆ.
ಈ ಕುರಿತು ಪೋಸ್ಟ್‌ಮ್ಯಾನ್ ನ್ಯೂಸ್ ಜೊತೆ ದೂರವಾಣಿ ಮೂಲಕ ಮಾತನಾಡಿದ ತಹಶೀಲ್ದಾರ್ ಭರತ್ ರಾಜ್, ನಗರ ಹೋಬಳಿಯನ್ನು ಹೊರತುಪಡಿಸಿ ಉಳಿದ ರಿಪ್ಪನ್‌ಪೇಟೆ ಹಾಗೂ ಹೊಸನಗರ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಇರುವುದರಿಂದ ರಜೆ ಘೋಷಣೆ ಕುರಿತು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಅವರು ಕೂಡ ಪೋಸ್ಟ್‌ಮ್ಯಾನ್ ನ್ಯೂಸ್‌ಗೆ ಮಾಹಿತಿ ನೀಡಿದ್ದು, ನಗರ ಹೋಬಳಿಯಲ್ಲಿ ಮಾತ್ರ ಭಾರೀ ಮಳೆ ದಾಖಲಾಗುತ್ತಿದೆ. ಉಳಿದ ಭಾಗಗಳಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರೊಂದಿಗೆ ನಾಳೆ ಬೆಳಿಗ್ಗೆ 7 ಗಂಟೆಯೊಳಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಹೀಗಾಗಿ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಅಂತಿಮ ಆದೇಶ ನಾಳೆ (ಆಗಸ್ಟ್ 3) ಬೆಳಿಗ್ಗೆ 7 ಗಂಟೆಗೆ ಪ್ರಕಟವಾಗುವ ಸಾಧ್ಯತೆ ಇದೆ.



