ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!
Sagar police arrested a man accused of shooting and killing a stray dog with an illegal firearm in Nadavalli village of Sagar taluk.
ಆನಂದಪುರ : ತನ್ನ ಸಾಕು ನಾಯಿಗಳೊಂದಿಗೆ ಜಗಳವಾಡಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಬೀದಿ ನಾಯಿಯೊಂದನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಆನಂದಪುರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಡವಳ್ಳಿ ಗ್ರಾಮದ ಲಿಂಗಮೂರ್ತಿ ಎಂದು ಗುರುತಿಸಲಾಗಿದೆ.
ಗ್ರಾಮದ ಬೋರೆಪ್ಪ ಎಂಬುವವರು ದನ ಮೇಯಿಸಲು ತೆರಳುತ್ತಿದ್ದಾಗ, ಕಂದು ಬಣ್ಣದ ಗಂಡು ಬೀದಿ ನಾಯಿಯೊಂದು ಅವರನ್ನು ಹಿಂಬಾಲಿಸಿಕೊಂಡು ಹೋಗುತ್ತಿತ್ತು. ಮಾರ್ಗಮಧ್ಯೆ ಲಿಂಗಮೂರ್ತಿ ಮನೆಯ ಬಳಿ ಆತನ ಸಾಕು ನಾಯಿಗಳೊಂದಿಗೆ ಈ ಬೀದಿ ನಾಯಿ ಕಚ್ಚಾಡಿದೆ. ಇದರಿಂದ ತೀವ್ರವಾಗಿ ಕೆರಳಿದ ಲಿಂಗಮೂರ್ತಿ, ಮನೆಯಲ್ಲಿದ್ದ ಅಕ್ರಮ ಬಂದೂಕು ತಂದು ಬೀದಿ ನಾಯಿಯ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಪರಿಣಾಮ, ಗುಂಡೇಟು ತಿಂದ ನಾಯಿ ರಕ್ತದ ಮಡುವಿನಲ್ಲಿ ಒದ್ದಾಡಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪರವಾನಗಿ ಇಲ್ಲದ ಬಂದೂಕು ಬಳಸಿ ಮೂಕಪ್ರಾಣಿಯನ್ನು ಹತ್ಯೆ ಮಾಡಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆನಂದಪುರ ಪಿಎಸ್‌ಐ ಪ್ರವೀಣ್ ನೇತೃತ್ವದ ತಂಡ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿ ಲಿಂಗಮೂರ್ತಿಯನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಬಿಎನ್‌ಎಸ್ ಹಾಗೂ ಆರ್ಮ್ಸ್ ಆಕ್ಟ್ (ಶಸ್ತ್ರಾಸ್ತ್ರ ಕಾಯ್ದೆ) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…