ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

Karnataka Cabinet Expansion 2026: Nineteen MLAs, including Dr. Ajay Singh, Madhu Bangarappa, and S.S. Mallikarjun, were sworn in as ministers in the D.K. Shivakumar-led cabinet at Lok Bhavan, Bengaluru.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಮಂಗಳವಾರ 19 ಮಂದಿ ನೂತನ ಸಚಿವರು ಸೇರ್ಪಡೆಯಾದರು. ಬೆಂಗಳೂರಿನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ನೂತನ ಸಚಿವರಾಗಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಒಟ್ಟು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸುವ ವೇಳೆ ವಿವಿಧ ಸಚಿವರು ತಮ್ಮ ನಂಬಿಕೆ ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ದೇವರ ಹೆಸರಿನಲ್ಲಿ ಅಥವಾ ಪ್ರತಿಜ್ಞಾವಿಧಿಯ ಮೂಲಕ ಅಧಿಕಾರ ಸ್ವೀಕರಿಸಿದರು.

ಡಾ. ಅಜಯ್ ಸಿಂಗ್ ಹಾಗೂ ಹೆಚ್.ಸಿ. ಬಾಲಕೃಷ್ಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಕೆ.ಎಸ್. ಬಸವಂತಪ್ಪ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಸವರಾಜ ರಾಯರೆಡ್ಡಿ ಕೇವಲ ಪ್ರತಿಜ್ಞಾವಿಧಿ ಸ್ವೀಕರಿಸಿದರೆ, ಎನ್. ಚೆಲುವರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಲಕ್ಷ್ಮಣ ಸವದಿ, ಮಧು ಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಿ. ನಾಗೇಂದ್ರ, ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ, ರುದ್ರಪ್ಪ ಲಮಾಣಿ ಹಾಗೂ ಕೆ.ಎಂ. ಶಿವಲಿಂಗೇಗೌಡ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ನರೇಂದ್ರ ಸ್ವಾಮಿ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಗಂಗಾಧರಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಶಾಸಕ ರಿಜ್ವಾನ್ ಅರ್ಷದ್ ಕೇವಲ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಂತೋಷ್ ಲಾಡ್ ಯಾವುದೇ ಹೆಸರನ್ನು ಉಲ್ಲೇಖಿಸದೇ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿಜಯಾನಂದ ಕಾಶಪ್ಪನವರ್ ಅವರು ಕೂಡಲ ಸಂಗಮ, ಪಂಚ ಪೀಠಾಧಿಪತಿಗಳು, ಬುದ್ಧ, ಬಸವ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ದೇವರ ಹೆಸರನ್ನು ಉಲ್ಲೇಖಿಸಿ ಪ್ರಮಾಣವಚನ ಸ್ವೀಕರಿಸಿದರು. ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರು ಅಲ್ಲಾ ಹಾಗೂ ತಮ್ಮ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂಪುಟ ವಿಸ್ತರಣೆಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟಕ್ಕೆ ಹೊಸ ಮುಖಗಳು ಸೇರ್ಪಡೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago