‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

Karnataka Public Places Access Control Bill 2026: ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭ, ಪಥಸಂಚಲನಕ್ಕೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಹೊಸ ವಿಧೇಯಕದ ವಿವರ.

ಬೆಂಗಳೂರು: ಕರ್ನಾಟಕ ಸರ್ಕಾರವು ಸಾರ್ವಜನಿಕ ಪ್ರದೇಶಗಳಲ್ಲಿ ಸಭೆ, ಸಮಾರಂಭ ಹಾಗೂ ಮೆರವಣಿಗೆಗಳನ್ನು ಆಯೋಜಿಸುವುದಕ್ಕೆ ನಿಯಂತ್ರಣ ಹೇರಲು ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ ವಿಧೇಯಕ–2026’ ಅನ್ನು ಇದೇ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಹೊಸ ವಿಧೇಯಕದ ಅನ್ವಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಆಟದ ಮೈದಾನಗಳು, ಪಾರ್ಕ್‌ಗಳು, ರಸ್ತೆಗಳು ಹಾಗೂ ನದಿ-ಕೆರೆಗಳ ಸುತ್ತಮುತ್ತ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೊದಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗುವ ಸಾಧ್ಯತೆಯಿದೆ.

ಸಭೆ, ಸಮಾರಂಭ, ಪಥಸಂಚಲನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸರ್ಕಾರ ನಿಗದಿಪಡಿಸುವ ನಿಯಮಗಳು ಮತ್ತು ಷರತ್ತುಗಳು ಅನ್ವಯವಾಗಲಿವೆ. ವಿಶೇಷವಾಗಿ ಧರ್ಮಾಧಾರಿತ ಸಂಘಟನೆಗಳು ಹಾಗೂ ನೋಂದಣಿ ಇಲ್ಲದ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೂ ಈ ಕಾನೂನು ಪರಿಣಾಮ ಬೀರಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಿಗೂ ಪರಿಣಾಮ?

ಇತ್ತೀಚೆಗೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ವಿಚಾರವಾಗಿ ಕಾನೂನು ಹೋರಾಟ ನಡೆದಿದ್ದ ಹಿನ್ನೆಲೆಯಲ್ಲಿ, ಈ ಹೊಸ ವಿಧೇಯಕದ ಬಗ್ಗೆ ರಾಜಕೀಯ ಚರ್ಚೆ ಮತ್ತಷ್ಟು ತೀವ್ರವಾಗಿದೆ. ಸರ್ಕಾರವು ಆರ್‌ಎಸ್‌ಎಸ್ ಸೇರಿದಂತೆ ಕೆಲವು ಸಂಘಟನೆಗಳ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಾನೂನು ತರುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಆದರೆ ಸರ್ಕಾರದ ವಾದವೇನೆಂದರೆ, ಯಾವುದೇ ಸಂಘಟನೆ ಅಥವಾ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸುವಾಗ ಅನುಮತಿ ಹಾಗೂ ನಿಯಮಗಳನ್ನು ಪಾಲಿಸಬೇಕು ಎಂಬುದು.

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ ಎಂದ ಸಿಎಂ

ಸಚಿವ ಸಂಪುಟ ಸಭೆಯ ಬಳಿಕ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವವರು ಅನುಮತಿ ಪಡೆಯಬೇಕು ಎಂಬ ನಿಲುವು ವ್ಯಕ್ತಪಡಿಸಿದ್ದಾರೆ.

“ನೀವೇ ಆಗಲಿ, ನಾವೇ ಆಗಲಿ ರಸ್ತೆಯಲ್ಲಿ ಪರ್ಮಿಷನ್ ತೆಗೆದುಕೊಂಡು ಕಾರ್ಯಕ್ರಮ ಮಾಡಬೇಕು. ಎಲ್ಲದಕ್ಕೂ ಒಂದು ಲೆಕ್ಕಾಚಾರ ಇರಬೇಕು. ಎಲ್ಲದಕ್ಕೂ ಒಂದು ಲೆಕ್ಕ ಇರಲಿ ಅಂತ ಹೇಳುತ್ತಿದ್ದೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಇತ್ತ, ವಿಧೇಯಕದ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾಯ್ದೆ ಆರ್‌ಎಸ್‌ಎಸ್ ಅನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಆರೋಪಿಸಿದ ಅವರು, ಇಂತಹ ಕ್ರಮಗಳನ್ನು ಎದುರಿಸುವುದು ಸಂಘಟನೆಗೆ ಗೊತ್ತಿದೆ ಎಂದು ಹೇಳಿದ್ದಾರೆ.

“ಇಂದಿರಾಗಾಂಧಿ, ನೆಹರೂ ಅವರಿಂದಲೂ ಏನೂ ಮಾಡಲು ಆಗಿಲ್ಲ. ಇಂತಹ ರಾಜಕಾರಣ ಮಾಡಿದರೆ ಮುಂದೆ ನೀವು ಮನೆಯಿಂದ ಹೊರಗಡೆ ಬರಲ್ಲ” ಎಂದು ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾದ ಬಳಿಕ ಅದರ ನಿಖರ ನಿಯಮಗಳು, ಅನುಮತಿ ಪ್ರಕ್ರಿಯೆ ಹಾಗೂ ಯಾವೆಲ್ಲಾ ಸಾರ್ವಜನಿಕ ಸ್ಥಳಗಳಿಗೆ ಅನ್ವಯವಾಗಲಿದೆ ಎಂಬುದು ಸ್ಪಷ್ಟವಾಗಲಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

11 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

12 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

12 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

14 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

17 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago