ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ
Election Commission of India extends Karnataka SIR voter list revision schedule. Door-to-door BLO verification continues until August 17, draft electoral roll on August 24, and final voter list to be published on October 27.
ನವದೆಹಲಿ, ಆ.7: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಮತ್ತೊಮ್ಮೆ ವಿಸ್ತರಿಸಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಅಧಿಕೃತವಾಗಿ ತಿಳಿಸಿದ್ದು, ಅದರ ಬಗ್ಗೆ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಜೊತೆಗೆ, ಪರಿಷ್ಕೃತ ವೇಳಾಪಟ್ಟಿಯನ್ನು ಲಭ್ಯವಿರುವ ಎಲ್ಲಾ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ವ್ಯಾಪಕವಾಗಿ ತಲುಪಿಸುವಂತೆ ಹಾಗೂ ಎಲ್ಲಾ ರಾಜಕೀಯ ಪಕ್ಷಗಳಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ ಮನೆ ಪರಿಶೀಲನೆ ಪ್ರಕ್ರಿಯೆ ಆಗಸ್ಟ್ 17ರವರೆಗೆ ಮುಂದುವರಿಯಲಿದೆ. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುವುದು.
ಅದರ ಬಳಿಕ ಸೆಪ್ಟೆಂಬರ್ 23ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಯನ್ನು ಅಕ್ಟೋಬರ್ 22ರೊಳಗೆ ಪೂರ್ಣಗೊಳಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…