ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

Farmers staged a massive protest in Sagara against the 7th draft notification of the Kasturirangan report, demanding a fresh physical survey and exclusion of inhabited and agricultural areas.

ಸಾಗರ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಗುರುವಾರ ಸಾಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಉಪವಿಭಾಗಾಧಿಕಾರಿ ಕಚೇರಿಯತ್ತ ಸಾಗಿತು. ಬಳಿಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್. ಹಾಲಪ್ಪ, ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹೆಸರಿನಲ್ಲಿ ಮಲೆನಾಡು ರೈತರ ಬದುಕಿಗೆ ತೊಂದರೆ ಉಂಟುಮಾಡುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂದು ಹೇಳಿದರು.

ರಾಜ್ಯದ 20,668 ಎಕರೆ ಪ್ರದೇಶ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಡಲಿದ್ದು, 1,449 ಗ್ರಾಮಗಳು ಇದರ ವ್ಯಾಪ್ತಿಗೆ ಬರುತ್ತವೆ. ಶಿವಮೊಗ್ಗ ಜಿಲ್ಲೆಯ 449 ಗ್ರಾಮಗಳು ಕೂಡ ಇದರಲ್ಲಿ ಸೇರಿವೆ. ಹೀಗಾಗಿ ಮಲೆನಾಡು ಭಾಗದ ರೈತರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದರು.

ಕೇರಳದಲ್ಲಿ ಸರ್ಕಾರ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಸರ್ಕಾರಿ ನೌಕರರು ಒಗ್ಗಟ್ಟಾಗಿ ವರದಿ ವಿರುದ್ಧ ಧ್ವನಿ ಎತ್ತಿದ್ದರಿಂದ ಪರಿಷ್ಕೃತ ವರದಿ ಜಾರಿಗೊಳಿಸಲಾಯಿತು. ಅಲ್ಲದೆ, ಸ್ಥಳೀಯವಾಗಿ ದೈಹಿಕ ಸಮೀಕ್ಷೆ ನಡೆಸಿ ಹಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವ್ಯಾಪ್ತಿಯಿಂದ ಕೈಬಿಡಲಾಗಿತ್ತು. ಕರ್ನಾಟಕದಲ್ಲಿಯೂ ಇದೇ ರೀತಿಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಹಾಲಪ್ಪ ಹೇಳಿದರು.

“ಕಸ್ತೂರಿ ರಂಗನ್ ವರದಿ ಕುರಿತು ಮುಖ್ಯಮಂತ್ರಿಯವರು ವಿಶೇಷ ಅಧಿವೇಶನ ಕರೆಯುತ್ತೇನೆ ಎಂದಿರುವುದನ್ನು ಸ್ವಾಗತಿಸುತ್ತೇನೆ. ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುವುದರಿಂದ ಸಮಸ್ಯೆ ಮತ್ತೊಂದು ರೂಪದಲ್ಲಿ ಎದುರಾಗುವ ಸಾಧ್ಯತೆಯಿದೆ. ಜನವಸತಿ, ಕೃಷಿ ಚಟುವಟಿಕೆ ಸೇರಿದಂತೆ ಬಳಕೆಯಲ್ಲಿರುವ ಭೂಮಿಯನ್ನು ಹೊರತುಪಡಿಸಿ ಮತ್ತೊಮ್ಮೆ ದೈಹಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಬೇಕು. ಇದರಿಂದ ಮಲೆನಾಡು ರೈತರ ಆತಂಕವನ್ನು ದೂರ ಮಾಡಬೇಕು,” ಎಂದು ಎಚ್. ಹಾಲಪ್ಪ ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಜಿಲ್ಲೆಗೆ ಶಾಪವಾಗಲಿದೆ. ವರದಿ ಯಥಾವತ್ತಾಗಿ ಅನುಷ್ಠಾನಗೊಂಡರೆ ಮಲೆನಾಡಿನ ಜನರಿಗೆ ಮರಣ ಶಾಸನವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರದಿ ವಿರುದ್ಧ ನಿರಂತರ ಹೋರಾಟ ನಡೆಯುತ್ತಿದ್ದು, ರೈತ ಸಂಘವು ಮುಂದಿನ ಎಲ್ಲ ಹೋರಾಟಗಳಿಗೂ ಕೈಜೋಡಿಸಲಿದೆ. ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ವರದಿಯಿಂದ ಮಲೆನಾಡು ಭಾಗವನ್ನು ರಕ್ಷಿಸಲು ಸಾಧ್ಯ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿಯನ್ನು ಪುನರ್ ಪರಿಶೀಲಿಸಬೇಕು. ಜನವಸತಿ ಪ್ರದೇಶಗಳನ್ನು ಹೊರಗಿಟ್ಟು ದೈಹಿಕ ಸಮೀಕ್ಷೆ ನಡೆಸಿ ಹೊಸದಾಗಿ ವರದಿ ಸಿದ್ಧಪಡಿಸಬೇಕು. ವರದಿ ಜಾರಿಯಾದಲ್ಲಿ ರಾಜ್ಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಮಗ್ರ ಮನವಿ ಸಲ್ಲಿಸಬೇಕು ಎಂದು ದಿನೇಶ್ ಶಿರವಾಳ ಒತ್ತಾಯಿಸಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಹಕ್ರೆ, ಟಿ.ಡಿ. ಮೇಘರಾಜ್, ಚೇತನರಾಜ ಕಣ್ಣೂರು, ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ ಮನೆಘಟ್ಟ, ಶಿವು ಮೈಲಾರಿಕೊಪ್ಪ, ಪ್ರಸನ್ನ ಕೆರೆಕೈ, ಸೋಮಶೇಖರ್, ಸಂತೋಷ್ ಚಿಕ್ಕನೆಲ್ಲೂರು, ಸುನೀಲ್, ಚಂದ್ರು ಪೂಜಾರಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬ್ಯಾರಿಕೇಡ್ ಕಿತ್ತೆಸೆದ ರೈತರು

ಪ್ರತಿಭಟನಾ ಮೆರವಣಿಗೆ ಉಪವಿಭಾಗಾಧಿಕಾರಿ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಳವಡಿಸಿತ್ತು. ಇದರಿಂದ ಆಕ್ರೋಶಗೊಂಡ ರೈತರು ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ ನಡೆಸಿದರು.

ರೈತರನ್ನು ಬ್ಯಾರಿಕೇಡ್ ಹಾಕಿ ತಡೆಯುವ ಮೂಲಕ ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ವಾಗ್ವಾದವೂ ನಡೆಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

50 minutes ago

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…

12 hours ago

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago