w
Headlines
Home » ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

GridArt 20260829

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating.

ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು.

ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆಯ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.

ಕಾರಣಗಿರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಎತ್ತಿನಗಾಡಿಯ ಮೇಲೆ ನಿಂತು ಕಸ್ತೂರಿರಂಗನ್ ವರದಿ ವಿರೋಧಿ ಪೋಸ್ಟರ್ ಪ್ರದರ್ಶಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಪಾದಯಾತ್ರೆಯಲ್ಲಿ ರೈತರು, ಕೃಷಿ ಕಾರ್ಮಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯಿಂದ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಹೊಸನಗರದವರೆಗೂ ಪಾದಯಾತ್ರೆ ಮುಂದುವರೆಯಲಿದ್ದು ನಂತರ ಬಹಿರಂಗ ಸಭೆ ಏರ್ಪಡಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.