ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ
Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi.
ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು.
ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ಮುಂಜಾನೆಯಿಂದಲೇ ನಾನಾ ಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ, ಮಹಾಪೂಜೆ ಮತ್ತು ಮಹಾಮಂಗಳಾರತಿ ನೆರವೇರಿತು. ಭಕ್ತರು ಹಣ್ಣು-ಕಾಯಿ, ಸೀರೆ, ನಾಣ್ಯ ಹಾಗೂ ವಿವಿಧ ಕಾಣಿಕೆಗಳನ್ನು ಅರ್ಪಿಸಿ ತಮ್ಮ ಹರಕೆಗಳನ್ನು ತೀರಿಸಿದರು. ತಾಯಿಯ ಕೃಪಾಕಟಾಕ್ಷಕ್ಕಾಗಿ ಪ್ರಾರ್ಥಿಸಿದ ಭಕ್ತರಿಗೆ ತೀರ್ಥ-ಪ್ರಸಾದ ವಿನಿಯೋಗ ನಡೆಯಿತು.
ಈ ಪುಣ್ಯ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ನೂರಾರು ಹಳ್ಳಿಗಳಿಂದ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಪ್ರಮುಖವಾಗಿ ಮಸರೂರು, ಕೆಂಚನಾಲ, ಬೆಳಂದೂರು, ಲಕ್ಕವಳ್ಳಿ, ಆಲವಳ್ಳಿ, ಕಮದೂರು, ಮಾದಾಪುರ, ಹಾಲುಗುಡ್ಡೆ, ಬಾಳೂರು ಸೇರಿದಂತೆ ರಿಪ್ಪನ್‌ಪೇಟೆ, ಬೆನವಳ್ಳಿ, ಅರಸಾಳು, ಆಯನೂರು, ಹುಂಚ, ಕೋಡೂರು, ಗರ್ತಿಕೆರೆ, ಆನಂದಪುರ, ಸಾಗರ, ಹೊಸನಗರ ಹಾಗೂ ಶಿವಮೊಗ್ಗ ನಗರಗಳಿಂದಲೂ ಜನಸ್ತೋಮ ಹರಿದುಬಂದು ದೇವಿಯ ದರ್ಶನಾಶೀರ್ವಾದ ಪಡೆಯಿತು.
ಜಾತ್ರೆಯಲ್ಲಿ ಮಹಿಳೆಯರು ಹಾಗೂ ನವದಂಪತಿಗಳ ಉಪಸ್ಥಿತಿ ಗಮನಸೆಳೆಯಿತು. ಸಂಸಾರದಲ್ಲಿ ಸುಖ-ಶಾಂತಿ ನೆಲೆಸಲಿ, ಕಲ್ಯಾಣ ಭಾಗ್ಯ ಒಲಿಯಲಿ ಮತ್ತು ಶೀಘ್ರ ಸಂತಾನ ಭಾಗ್ಯ ಪ್ರಾಪ್ತಿಯಾಗಲೆಂದು ಮಾರಿಕಾಂಬಾ ದೇವಿಯ ಸನ್ನಿಧಿಯಲ್ಲಿ ವಿಶೇಷ ಹರಕೆ ಹೊತ್ತು ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಸುತ್ತಮುತ್ತ ಜಾತ್ರೆಯ ಮೆರುಗು ಹೆಚ್ಚಾಗಿತ್ತು. ಬಗೆಬಗೆಯ ಸಿಹಿತಿಂಡಿಗಳು, ಖಾರ ಮಂಡಕ್ಕಿ, ಮಕ್ಕಳ ಆಟಿಕೆ ಸಾಮಗ್ರಿಗಳು, ಸ್ಟೇಷನರಿ ಹಾಗೂ ಹೂವು-ಹಣ್ಣುಗಳ ಮಳಿಗೆಗಳಲ್ಲಿ ಭರ್ಜರಿ ವ್ಯಾಪಾರ-ವಹಿವಾಟು ನಡೆಯಿತು. ಜಾತ್ರೆಯುದ್ದಕ್ಕೂ ಸಾಂಸ್ಕೃತಿಕ ಹಾಗೂ ಸಂಪ್ರದಾಯಬದ್ಧ ಹಬ್ಬದ ವಾತಾವರಣ ಮನೆಮಾಡಿತ್ತು.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…