w
Headlines
Home » ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

Screenshot 2026 08 26 20 44 46 000 com.openai.chatgpt edit

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

A man identified as Anand Poojari was allegedly murdered at night in Madasuru, Sagar taluk. Police have launched an investigation into the murder.

ಸಾಗರ: ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು–ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಎಂಬುವವರನ್ನು ಕಳೆದ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಆನಂದ ಪೂಜಾರಿ ಅವರು ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಹತ್ಯೆ ನಡೆದಿರುವುದಾಗಿ ತಿಳಿದುಬಂದಿದೆ. ಆದರೆ, ಕೊಲೆಗೆ ನಿಖರ ಕಾರಣ ಹಾಗೂ ಕೃತ್ಯ ಎಸಗಿದವರ ಕುರಿತು ಈವರೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ನೇತೃತ್ವದ ಪೊಲೀಸ್ ತಂಡವೂ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇದೇ ವೇಳೆ, ಊರಿನ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಡಸೂರು ವೀರೇಂದ್ರ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಪೊಲೀಸ್ ಇಲಾಖೆಯನ್ನು ಭೇಟಿ ಮಾಡಿ, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಹತ್ಯೆಯ ಹಿಂದಿನ ಕಾರಣ, ಆರೋಪಿಗಳ ಗುರುತು ಹಾಗೂ ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.