ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ
MLA Gopalakrishna Beluru visited the families of road accident victim Archana Jain and offered condolences and financial assistance.
ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅರ್ಚನಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಅವರ ತಂದೆ ನೀಲಕುಮಾರ್ ಜೈನ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರ್ಚನಾ ಜೈನ್ ಅವರು ಉಡುಪಿಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸಕ್ಕೆ ತೆರಳುವ ಮುನ್ನ ತಂದೆ ನೀಲಕುಮಾರ್ ಜೈನ್ ಅವರು ಮಗಳನ್ನು ಬಸ್‌ಗೆ ಕಳುಹಿಸಲು ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿತ್ತು.
ದುಃಖದಲ್ಲಿರುವ ಕುಟುಂಬದೊಂದಿಗೆ ನಿಂತ ಶಾಸಕ ಗೋಪಾಲಕೃಷ್ಣ ಬೆಳೂರು ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿ, ಆರ್ಥಿಕ ನೆರವು ನೀಡಿದರು. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದಿಂದ ದೊರೆಯಬಹುದಾದ ನೆರವು ಹಾಗೂ ಅಗತ್ಯ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…
ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…