w
Headlines
Home » ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

Screenshot 2026 08 08 20 47 08 218 com.openai.chatgpt edit

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

Nagarahalli Sri Nagendra Swamy Jatre will be held on August 17 on the occasion of Nagara Panchami. Special abhisheka, puja and Mahamangalarati will be performed.

ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಅಂಗವಾಗಿ ಆಗಸ್ಟ್ 17ರಂದು ಶ್ರೀ ನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್ ತಿಳಿಸಿದ್ದಾರೆ.

ನಾಗರಹಳ್ಳಿಯ ಶ್ರೀ ನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ವರ್ಷದಲ್ಲಿ ಎರಡು ಬಾರಿ ನಾಗರ ಪಂಚಮಿ ಸಂದರ್ಭದಲ್ಲಿ ಜರುಗುವ ಜಾತ್ರಾ ಮಹೋತ್ಸವ ಇಲ್ಲಿನ ವಿಶೇಷತೆಯಾಗಿದೆ.

ಆ.17ರಂದು ಬೆಳಗ್ಗೆ ಬ್ರಾಹ್ಮ ಮುಹೂರ್ತದಲ್ಲಿ ಶ್ರೀ ನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಬಳಿಕ ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.

ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಹಾಗೂ ವಿವಿಧೆಡೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ನಾಗೇಂದ್ರ ಸ್ವಾಮಿಯ ದರ್ಶನ ಪಡೆದು ದೇವರ ಆಶೀರ್ವಾದಕ್ಕೆ ಪಾತ್ರರಾಗುವಂತೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.