ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

Narayan Guru Jayanti and Onam celebration held at Ripponpete Tilak Mantapa. Nittoor Renukananda Swamiji highlighted Narayan Guru’s message of social equality, education and empowerment.

ರಿಪ್ಪನ್‌ಪೇಟೆ: ಮನುಕುಲದ ಸಾಮಾಜಿಕ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯ ಮೂಲಕ ಶೋಷಿತ ಸಮುದಾಯಗಳಿಗೆ ಬೆಳಕು ನೀಡಿದ ಮಹಾನ್ ಚೇತನ ನಾರಾಯಣ ಗುರುಗಳು ಎಂದು ನಿಟ್ಟೂರು ರೇಣುಕಾನಂದ ಸ್ವಾಮೀಜಿ ಹೇಳಿದರು.

ರಿಪ್ಪನ್‌ಪೇಟೆಯ ತಿಲಕ್ ಮಂಟಪದಲ್ಲಿ ನಾರಾಯಣ ಮಿಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 170ನೇ ವರ್ಷದ ನಾರಾಯಣ ಗುರು ಜಯಂತ್ಯೋತ್ಸವ ಹಾಗೂ ಓಣಂ ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯರೆಲ್ಲರೂ ಸಮಾನರು ಎಂಬ ತತ್ವವನ್ನು ನಾರಾಯಣ ಗುರುಗಳು ಸಮಾಜಕ್ಕೆ ಸಾರಿದರು ಎಂದು ತಿಳಿಸಿದರು.

“ಕುಡಿಯುವ ನೀರು ಒಂದೇ, ಹರಿಯುವ ರಕ್ತ ಒಂದೇ, ಸುರಿಯುವ ಮಳೆ ಒಂದೇ. ಆದರೆ ಮನುಷ್ಯ ಮಾತ್ರ ಭೇದಭಾವದ ಮೂಲಕ ಸಮಾಜವನ್ನು ಹಾಳುಗೆಡವಲು ಯತ್ನಿಸುತ್ತಾನೆ. ಇಂತಹ ಸಂದರ್ಭದಲ್ಲಿ ಯುಗಪುರುಷರು ಜನ್ಮ ತಾಳುತ್ತಾರೆ. ಕೇರಳದಲ್ಲಿ ಅಸಮಾನತೆಯ ವಿರುದ್ಧ ನಾರಾಯಣ ಗುರುಗಳು ಧ್ವನಿ ಎತ್ತಿ, ಶಿಕ್ಷಣದ ಮೂಲಕ ತಳ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದರು,” ಎಂದು ಹೇಳಿದರು.

ಅಂಧಕಾರ, ಅಸಮಾನತೆ ಹಾಗೂ ಸ್ತ್ರೀ ಶೋಷಣೆಯನ್ನು ಹೋಗಲಾಡಿಸಲು ಶಿಕ್ಷಣ, ಸಂಘಟನೆ ಮತ್ತು ಜ್ಞಾನ ಎಂಬ ಮಂತ್ರವನ್ನು ನಾರಾಯಣ ಗುರುಗಳು ಬೋಧಿಸಿದರು. ಮನುಷ್ಯರೆಲ್ಲರೂ ಒಂದೇ ಎಂಬ ತತ್ವದ ಮೂಲಕ ಸಮ ಸಮಾಜದ ಪರಿಕಲ್ಪನೆಗೆ ಅವರು ಬುನಾದಿ ಹಾಕಿದರು ಎಂದು ಸ್ವಾಮೀಜಿ ಹೇಳಿದರು.

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ, ಜಾತಿ, ಅಸ್ಪೃಶ್ಯತೆ ಹಾಗೂ ಅಸಮಾನತೆ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸಮಾನತೆಯ ಅರಿವು ಮೂಡಿಸಿದ ಪ್ರಮುಖ ಸಮಾಜ ಸುಧಾರಕರಲ್ಲಿ ನಾರಾಯಣ ಗುರುಗಳು ಒಬ್ಬರು. ಅವರ ಪ್ರಯತ್ನಗಳಿಂದ ಬಿಲ್ಲವ ಸಮುದಾಯ ಸೇರಿದಂತೆ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿ ಹೆಚ್ಚಾಯಿತು ಎಂದರು.

ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಮಾತನಾಡಿ, ಕೇರಳದಲ್ಲಿ ಜಾತಿ ಪದ್ಧತಿಯ ವಿಷಬೀಜ ಆವರಿಸಿದ್ದ ಸಂದರ್ಭದಲ್ಲಿ ಅಸ್ಪೃಶ್ಯತೆ, ಅನಕ್ಷರತೆ ಹಾಗೂ ಅಸಮಾನತೆಯ ವಿರುದ್ಧ ನಾರಾಯಣ ಗುರುಗಳು ನಡೆಸಿದ ಹೋರಾಟ ಮತ್ತು ಸೇವೆ ಅನನ್ಯವಾದುದು. ತಾರತಮ್ಯಕ್ಕೆ ಒಳಗಾಗಿದ್ದ ಸಮುದಾಯಗಳ ಧ್ವನಿಯಾಗಿ ಅವರು ಹೊರಹೊಮ್ಮಿದರು ಎಂದು ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷ ಪಿ. ರಮೇಶ್ ಮಾತನಾಡಿ, ಸಂಘರ್ಷಕ್ಕೆ ಅವಕಾಶ ನೀಡದೆ ಮೌನಕ್ರಾಂತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ನಾರಾಯಣ ಗುರುಗಳು ದೂರದೃಷ್ಟಿಯ ಚಿಂತನೆಯೊಂದಿಗೆ ಶಿಕ್ಷಣದ ಮಹತ್ವವನ್ನು ಸಾರಿದರು. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅವರ ಮೌಲ್ಯಗಳು ಎಂದಿಗೂ ಆದರ್ಶವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷ ಸುಧೀಂದ್ರ ಪೂಜಾರಿ, ಟ್ರಸ್ಟ್‌ನ ಶಾಖಾಧ್ಯಕ್ಷ ಸೋಮಶೇಖರ್, ಎನ್. ಸತೀಶ್, ಸುಂದರೇಶ್, ತ.ಮ. ನರಸಿಂಹ, ನಿರೂಪ್ ಕುಮಾರ್, ಚಂದ್ರಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

2 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 days ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

2 days ago