ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ
Postman News report brings action on Huncha mortuary issue as DHO inspects the facility and authorities begin steps to complete pending works and open it for public use.
ಹುಂಚ: ಆರು ವರ್ಷಗಳಿಂದ ಉದ್ಘಾಟನೆಯಾಗದೆ, ಬಳಕೆಗೆ ಬಾರದಿದ್ದ ಹುಂಚ ಗ್ರಾಮದ ಶವಾಗಾರದ ಸಮಸ್ಯೆ ಇದೀಗ ಪೋಸ್ಟ್‌ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿಯಾಗಿ ಪರಿಹಾರದ ಹಾದಿ ಹಿಡಿದಿದೆ.
ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2018ರಲ್ಲಿ ಸುಮಾರು ₹7.80 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡಿದ್ದ ಮರಣೋತ್ತರ ಪರೀಕ್ಷಾ ಕೊಠಡಿ ವರ್ಷಗಳ ಕಾಲ ಬೀಗ ಹಾಕಿಕೊಂಡೇ ಉಳಿದಿತ್ತು. ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದರೂ ಅಗತ್ಯ ಸೌಲಭ್ಯಗಳ ಕೊರತೆ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳ ಕಾರಣದಿಂದ ಸಾರ್ವಜನಿಕರ ಸೇವೆಗೆ ಲಭ್ಯವಾಗಿರಲಿಲ್ಲ.
ಈ ಕುರಿತು ಪೋಸ್ಟ್‌ಮ್ಯಾನ್ ನ್ಯೂಸ್ ಸಮಗ್ರ ವರದಿ ಪ್ರಕಟಿಸಿ, ಶವಾಗಾರ ಬಳಕೆಗೆ ಬಾರದಿರುವುದರಿಂದ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬಡ ಕುಟುಂಬಗಳಿಗೆ ಉಂಟಾಗುತ್ತಿರುವ ತೊಂದರೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿತ್ತು.
ವರದಿಗೆ ಸ್ಪಂದಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ ನಟರಾಜ್ ರವರು ಹುಂಚದ ಶವಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಅವರು ಶವಾಗಾರದಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಶವಾಗಾರವನ್ನು ಶೀಘ್ರದಲ್ಲೇ ಉದ್ಘಾಟಿಸಿ ಸಾರ್ವಜನಿಕರ ಅನುಕೂಲಕ್ಕಾಗಿ ಮುಕ್ತಗೊಳಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇದರಿಂದ ಹುಂಚ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಮರಣೋತ್ತರ ಪರೀಕ್ಷೆಗಾಗಿ ಹೊಸನಗರ ಅಥವಾ ರಿಪ್ಪನ್‌ಪೇಟೆಗೆ ತೆರಳಬೇಕಾದ ಅನಿವಾರ್ಯತೆ ದೂರವಾಗುವ ನಿರೀಕ್ಷೆಯಿದೆ.
ಈ ಸಮಸ್ಯೆಯ ಕುರಿತು ನಿರಂತರವಾಗಿ ಧ್ವನಿ ಎತ್ತಿದ ಜಿಪಂ ಮಾಜಿ ಸದಸ್ಯೆ ಶ್ವೇತಾ ಬಂಡಿ ಹಾಗೂ ಸ್ಥಳೀಯ ಹೋರಾಟಗಾರರಾದ ಸತೀಶ್ ಈರನಬೈಲು ಮತ್ತು ರಾಘವೇಂದ್ರ ಅವರ ಪ್ರಯತ್ನಕ್ಕೂ ಫಲ ದೊರೆತಂತಾಗಿದೆ.
ಜನರ ಸಮಸ್ಯೆಗೆ ಸ್ಪಂದಿಸಿ ಶವಾಗಾರವನ್ನು ಸಾರ್ವಜನಿಕರ ಬಳಕೆಗೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಎಲ್ಲರಿಗೂ ಪೋಸ್ಟ್‌ಮ್ಯಾನ್ ನ್ಯೂಸ್ ವತಿಯಿಂದ ಅಭಿನಂದನೆಗಳು.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…