ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

Private bus loses control and crashes into a betel nut plantation near Kudligere in Bhadravati, Shivamogga, leaving more than 15 passengers seriously injured.

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.

ಖಾಸಗಿ ಬಸ್‌ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವೇಳೆ ಕೂಡ್ಲಿಗೆರೆ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಬಸ್‌ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ್ದು, ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದಿದ್ದಾರೆ. ಬಳಿಕ ಗಾಯಾಳುಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಮಾಹಿತಿ ಪಡೆದ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 hour ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

3 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

3 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

13 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

21 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

22 hours ago