ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

Renukaswamy murder case takes a major turn as Bengaluru court allows accused A-14 Pradosh to turn approver. Details of the latest court development involving Darshan and Pavithra Gowda.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಕಂಡುಬಂದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯ ಸೋಮವಾರ ಒಪ್ಪಿಗೆ ನೀಡಿದೆ.

ಪ್ರದೋಷ್‌ ಸಲ್ಲಿಸಿದ್ದ 11 ಪುಟಗಳ ಕ್ಷಮಾದಾನ ಅರ್ಜಿಯಲ್ಲಿ, ಪ್ರಕರಣದಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ದರ್ಶನ್‌ ಅವರ ಪರಿಚಯವಾದ ದಿನದಿಂದ ಹಿಡಿದು ಪ್ರಕರಣದಲ್ಲಿ ಬಂಧನಕ್ಕೊಳಗಾಗುವವರೆಗಿನ ಹಲವು ಬೆಳವಣಿಗೆಗಳನ್ನು ನ್ಯಾಯಾಲಯದ ಮುಂದೆ ವಿವರಿಸಿರುವುದಾಗಿ ವರದಿಯಾಗಿದೆ.

ಈ ಹಿಂದೆ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್‌ ಒಪ್ಪಿಗೆ ನೀಡಿತ್ತು. ಆದರೆ ಇದಕ್ಕೆ ದರ್ಶನ್‌ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನ್ಯಾಯಾಲಯವು ಪ್ರದೋಷ್‌ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಪುರಸ್ಕರಿಸಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಪ್ರದೋಷ್‌ ಮಾಫಿ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಲ್ಲಿ ಅವರ ಹೇಳಿಕೆಗಳು ಮಹತ್ವ ಪಡೆದುಕೊಳ್ಳುವ ಸಾಧ್ಯತೆಯಿದೆ. ಇದರಿಂದ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಮತ್ತಷ್ಟು ಕುತೂಹಲ ಮೂಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

3 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

3 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

3 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago