ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain.

ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯಲ್ಲಿ ಆಡಳಿತಾಧಿಕಾರಿ ರಾಜೇಂದ್ರ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಂಜಪ್ಪ ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ. ಆಂಜನೇಯ ಧ್ವಜಾರೋಹಣ ನೆರವೇರಿಸಿದರು.

ನಾಡ ಕಚೇರಿಯಲ್ಲಿ ಉಪತಹಶೀಲ್ದಾರ್ ಗೌತಮ್, ಬಿಸಿಎಂ ವಸತಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರಾಬಾಯಿ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಸಂತೋಷ ಹಾಗೂ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು.

ಎಸ್‌ಸಿ–ಎಸ್‌ಟಿ ವಸತಿ ಶಾಲೆಯಲ್ಲಿ ಮೇಲ್ವಿಚಾರಕರು, ಮೆಸ್ಕಾಂನಲ್ಲಿ ರಾಘವೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರು, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಕೃಷ್ಣಮೂರ್ತಿ, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಪ್ಪ ಡಿ. ಧ್ವಜಾರೋಹಣ ನೆರವೇರಿಸಿದರು.

ಪಶು ಆಸ್ಪತ್ರೆಯಲ್ಲಿ ಹೊಸನಗರ ತಾಲ್ಲೂಕು ಸಹಾಯಕ ನಿರ್ದೇಶಕ ಡಾ. ಕೆ.ಎಂ. ನಾಗರಾಜ್, ಮೇರಿಮಾತಾ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿ ಫಾತಿಮಾ, ಗುಡ್ ಶಫರ್ಡ್ ಚರ್ಚ್‌ನಲ್ಲಿ ಜೆಸ್ಮಿನ್, ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಳಕೊಪ್ಪ ಈಶ್ವರ ಹಾಗೂ ಹೇಮರಾಜ್, ರೋಟರಿ ಕ್ಲಬ್‌ನಲ್ಲಿ ಅಧ್ಯಕ್ಷ ರವೀಂದ್ರ ಬಲ್ಲಾಳ್ ಮತ್ತು ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷ ಹಸನಬ್ಬ ಧ್ವಜಾರೋಹಣ ನೆರವೇರಿಸಿದರು.

ಇದರೊಂದಿಗೆ ವಿವಿಧ ಕಚೇರಿಗಳಲ್ಲಿಯೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ಮಳೆಯ ನಡುವೆಯೂ ಪಥಸಂಚಲನ:
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳ ಪಥಸಂಚಲನ ನಡೆಯಿತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಮಕ್ಕಳು ಉತ್ಸಾಹದಿಂದ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿ ದೇಶಭಕ್ತಿಯ ಮೆರೆದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

7 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

7 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

7 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

9 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

13 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago