ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ
Ripponpete’s Apeksha K. secured second place and runner-up honors in the Kata category at the 7th International Karate Championship held in Shivamogga
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಸ್ಥಳೀಯ ಕರಾಟೆ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪಂದ್ಯಾವಳಿಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ರಿಪ್ಪನ್‌ಪೇಟೆಯ ಅಪೇಕ್ಷಾ ಕೆ. ಅವರು ದ್ವಿತೀಯ ಸ್ಥಾನ ಪಡೆದು ರನ್ನರ್‌ಅಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಪೇಕ್ಷಾ ಅವರು ಹುಂಚದಕಟ್ಟೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಕೌಶಲ ಪ್ರದರ್ಶಿಸಿದ ಅಪೇಕ್ಷಾ, ತಮ್ಮ ಕರಾಟೆ ತರಗತಿ, ಪೋಷಕರು ಹಾಗೂ ರಿಪ್ಪನ್‌ಪೇಟೆಗೆ ಕೀರ್ತಿ ತಂದಿದ್ದಾರೆ.
ಅಪೇಕ್ಷಾ ಅವರ ಸಾಧನೆಗೆ ಹೊಸನಗರ ತಾಲೂಕು ಕರಾಟೆ ಶಿಕ್ಷಕರ ಸಂಘ (ರಿ.) ಹಾಗೂ ಐ ಕಿ ಸ್ಕೂಲ್ ಆಫ್ ಮಾರ್ಷಲ್ ಆರ್ಟ್ಸ್ ಇಂಡಿಯಾ ಅಭಿನಂದನೆ ಸಲ್ಲಿಸಿವೆ.
ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರ ಸಾಧನೆಗೆ ಬೆಂಬಲವಾಗಿ ನಿಂತು ಪ್ರೋತ್ಸಾಹಿಸಿದ ಪೋಷಕರಿಗೂ ಸಂಸ್ಥೆಯ ವತಿಯಿಂದ ವಿಶೇಷ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ಮುಂದೆಯೂ ಮಕ್ಕಳ ಕ್ರೀಡಾ ಪ್ರತಿಭೆಗೆ ಇದೇ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ಮುಂದುವರಿಯಲಿ ಎಂದು ಸಂಸ್ಥೆ ಆಶಿಸಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…