ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available.

ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಎರಡೂ ಬದಿಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಅರಸಾಳು ಗ್ರಾಮದ ಸಮೀಪದ 9ನೇ ಮೈಲಿಗಲ್ಲು (9 MS) ಬಳಿ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಉರುಳಿದೆ. ಇದರಿಂದ ರಿಪ್ಪನ್‌ಪೇಟೆ ಹಾಗೂ ಆಯನೂರು ಎರಡೂ ಕಡೆಯಿಂದ ಸಂಚರಿಸುತ್ತಿದ್ದ ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ.

ಮರ ಉರುಳಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸದ್ಯ ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರಸ್ತೆ ಸಂಚಾರವನ್ನು ಸಹಜ ಸ್ಥಿತಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.

ಮರ ತೆರವು ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪರ್ಯಾಯ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.

 ಪರ್ಯಾಯ ಮಾರ್ಗ
ರಿಪ್ಪನ್‌ಪೇಟೆ → ಅರಸಾಳು → 9 MS → ಹಾರೋಹಿತ್ಲು → ಬಸವಾಪುರ → 5 MS → ಆಯನೂರು

ಅದೇ ರೀತಿ ಆಯನೂರು ಕಡೆಯಿಂದ ರಿಪ್ಪನ್‌ಪೇಟೆಗೆ ಬರುವ ವಾಹನಗಳು,

ಆಯನೂರು → 5 MS → ಬಸವಾಪುರ → ಹಾರೋಹಿತ್ಲು → 9 MS → ಅರಸಾಳು → ರಿಪ್ಪನ್‌ಪೇಟೆ ಮಾರ್ಗವಾಗಿ ಸಂಚರಿಸಬಹುದಾಗಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನು ಸಂಪೂರ್ಣವಾಗಿ ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಪುನಃ ಆರಂಭವಾಗುವ ನಿರೀಕ್ಷೆಯಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಹಾಗೂ ಸ್ಥಳದಲ್ಲಿನ ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

4 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

21 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

21 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

21 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

21 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

1 day ago