RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ
Ripponpete Eid Milad Committee 2026 formed with Ismail as President and Farooq as General Secretary under Mohiyuddin Jumma Masjid.
ರಿಪ್ಪನ್ ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ 2026ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ರಿಪ್ಪನ್ ಪೇಟೆಯಲ್ಲಿ ಪ್ರತಿವರ್ಷ ನಾಲ್ಕು ದಿನಗಳ ಕಾಲ ಈದ್ ಮಿಲಾದ್ ಆಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ನಡೆಯುವ ಈ ಆಚರಣೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗುತ್ತದೆ.
ಈ ವರ್ಷದ ಕಾರ್ಯಕ್ರಮವನ್ನು ಮತ್ತಷ್ಟು ಅರ್ಥಪೂರ್ಣ ಹಾಗೂ ಭಾವಪೂರ್ಣವಾಗಿ ಆಯೋಜಿಸುವ ಉದ್ದೇಶದಿಂದ ನೂತನ ಸಮಿತಿಯನ್ನು ರಚಿಸಲಾಗಿದೆ. ಕಾರ್ಯಕ್ರಮದ ರೂಪುರೇಷೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವ ಕುರಿತು ಸಮಿತಿ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದೆ.
ನೂತನ ಸಮಿತಿಯ ಉಪಾಧ್ಯಕ್ಷರಾಗಿ ಮುಸ್ತಫಾ ಹಾಗೂ ಕಾರ್ಯದರ್ಶಿಯಾಗಿ ಹಾಶೀಂ ಅವರನ್ನು ಆಯ್ಕೆ ಮಾಡಲಾಗಿದೆ.
ಸಮಿತಿ ಸದಸ್ಯರಾಗಿ ಮುತ್ತಲಿಬ್ ವೈರಿಂಗ್, ಶೂಹೆಬ್ ಸಿ. ಅಬ್ದುಲ್ಲಾ, ಹಬೀಬ್ ಮದೀನಾ ಕಾಲೋನಿ, ರಿಯಾಜ್ ಪೇಂಟ್, ಮುಸ್ತಫಾ, ಮಯ್ಯದ್ದಿ, ಶಬೀರ್ ಫ್ರೂಟ್, ಅಕ್ಬರ್ ಡೀಲರ್, ತೌಹೀದ್ ಹಸ್ನರ್ ಸಾಬ್, ಮಷೂಂ ಜಬ್ಬಾರ್ ಸಾಬ್, ರಾಹಿಲ್ ಅಜೀಜ್, ಶಂಶುದ್ದೀನ್ ಟ್ರೆಂಡ್ಸ್, ಸಫ್ವಾನ್ ಸೈದಾ, ಸಿರಾಜ್ ಸರ್ವಿಸ್, ಇಮ್ರಾನ್ ಮೊಬೈಲ್, ಸಾದಿಕ್ ಮದೀನಾ ಕಾಲೋನಿ, ಸಿದ್ದಿಕ್ ಮೊಬೈಲ್, ಜುನೈದ್ ವೆಲ್ಡಿಂಗ್, ಸಿದ್ದಿಕ್ ಡ್ರೈವರ್ ಅಬ್ದುಲ್ಲಾ, ನೌಶಾನ್ ವಾಚ್ ಹಾಗೂ ಅಸ್ಫಾಕ್ ಚಾಬು ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಧರ್ಮಗುರುಗಳು, ಸಮುದಾಯದ ಮುಖಂಡರು, ಯುವಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…