ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು
Six sheep belonging to a resident of Sagar were reportedly killed in a stray dog attack, raising concerns over the increasing stray dog menace in the city.
ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳು ಬೀದಿ ನಾಯಿಗಳ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಸಾಗರ ನಗರದಲ್ಲಿ ನಡೆದಿದೆ.
ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ ಕುರಿಗಳ ಮೇಲೆ ತಡರಾತ್ರಿ ಬೀದಿ ನಾಯಿಗಳು ದಾಳಿ ನಡೆಸಿವೆ ಎನ್ನಲಾಗಿದೆ. ಬೆಳಗ್ಗೆ ಕುರಿಗಳಿಗೆ ಮೇವು ಹಾಕಲು ತೆರಳಿದಾಗ ಆರು ಕುರಿಗಳು ರಕ್ತದ ಮಡುವಿನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಕುರಿಗಳನ್ನು ಕಳೆದುಕೊಂಡ ಮಾಲೀಕರು ಕಣ್ಣೀರಿಟ್ಟಿದ್ದಾರೆ.
ಸಾಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳು, ವೃದ್ಧರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಬಗ್ಗೆಯೂ ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…