ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ
Heavy rainfall has prompted authorities to declare a holiday for all schools and colleges in Sagar and Thirthahalli taluks on Monday, August 3, 2026, as a precautionary measure.
ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ (03-08-2026) ರಂದು ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಾಗರ ತಹಶೀಲ್ದಾರ್ ಆರ್ ಪ್ರತಿಭಾ ಹಾಗೂ ತೀರ್ಥಹಳ್ಳಿ ತಹಶೀಲ್ದಾರ್ ರಂಜಿತ್ ಅವರು ಪ್ರತ್ಯೇಕ ಆದೇಶ ಹೊರಡಿಸಿ, ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.
ಸಾರ್ವಜನಿಕರು ಹಾಗೂ ಪೋಷಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಹಾಗೂ ಅನಗತ್ಯವಾಗಿ ನದಿ, ಹಳ್ಳ-ಕೊಳ್ಳ ಮತ್ತು ಗುಡ್ಡ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…