ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ

A man allegedly killed his father in Goragodu near Tumari, Sagara taluk, Shivamogga, after a heated argument. Police have detained the accused and are investigating the case.

ಶಿವಮೊಗ್ಗ: ಜೈಲಿನಿಂದ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಮನೆಗೆ ಮರಳಿದ್ದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪದ ಘಟನೆ ಸಾಗರ ತಾಲೂಕಿನ ತುಮರಿ ಸಮೀಪದ ಗೊರಗೋಡು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುಬ್ಬರಾಯ ನಾಯ್ಕ (55) ಎಂದು ಗುರುತಿಸಲಾಗಿದ್ದು, ಅವರ ಮಗ ಜಯಂತ್ (28-29) ಆರೋಪಿಯಾಗಿದ್ದಾನೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ.

14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ತಂದೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುಬ್ಬರಾಯ ನಾಯ್ಕ ಈ ಹಿಂದೆ ತನ್ನ ತಂದೆ ಹಾಗೂ ತಂಗಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಸುಮಾರು 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದನು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇತ್ತೀಚೆಗೆ, ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದರು ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಮನೆಯಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದರು ಹಾಗೂ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ.

ಮಾತಿನ ಚಕಮಕಿ ವಿಕೋಪಕ್ಕೆ

ಘಟನೆ ನಡೆದ ದಿನ ತಂದೆ ಮತ್ತು ಮಗನ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಸುಬ್ಬರಾಯ ನಾಯ್ಕ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ, ಕೋಪಗೊಂಡ ಜಯಂತ್ ತನ್ನ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುಬ್ಬರಾಯ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಆರೋಪ

ತಂದೆ ಮೃತಪಟ್ಟ ಬಳಿಕ ಘಟನೆ ಬಹಿರಂಗವಾಗದಂತೆ ಮಾಡಲು ಜಯಂತ್ ಮೃತದೇಹವನ್ನು ಸಮೀಪದ ಬಾವಿಗೆ ಎಸೆದು ಮುಚ್ಚಿಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಜಯಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ಸೇರಿದಂತೆ ತನಿಖೆ ಮುಂದುವರಿದಿದೆ.

ಘಟನೆಗೆ ನಿಖರ ಕಾರಣ, ತಂದೆ ಜೈಲಿನಿಂದ ಬಿಡುಗಡೆಯಾದ ಬಳಿಕ ಕುಟುಂಬದಲ್ಲಿ ನಡೆದಿದ್ದ ಗಲಾಟೆಗಳು ಹಾಗೂ ಕೊಲೆಯ ಹಿಂದಿರುವ ಪರಿಸ್ಥಿತಿಗಳ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಸೂಚನೆ: ಪ್ರಕರಣದ ಆರೋಪಗಳು ಪೊಲೀಸ್ ತನಿಖೆಯಲ್ಲಿದ್ದು, ಅಂತಿಮ ಸತ್ಯಾಂಶ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯ ನಂತರವೇ ಸ್ಪಷ್ಟವಾಗಬೇಕಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

15 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

15 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

15 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

17 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

21 hours ago