POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

Screenshot 2026 08 20 21 15 08 287 com.openai.chatgpt edit

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

Seema Kausar, Head and Associate Professor of Political Science at Indira Gandhi College, Sagar, has been awarded a PhD by Tumkur University for her research on transformations in Karnataka politics from 1947 to 2000.

ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಹನೀಫ್ ಸಾಬ್ ಅವರ ಪುತ್ರಿ ಹಾಗೂ ನದೀಮ್ ನವಾಜ್ ಅವರ ಪತ್ನಿ, ಸಾಗರದ ಇಂದಿರಾ ಗಾಂಧಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕಿ ಸೀಮಾ ಕೌಸರ್ ಹೆಚ್. ಅವರು ಪಿಎಚ್.ಡಿ ಪದವಿ ಪಡೆದಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರೊ. ಸುರೇಶ್ ಕೆ.ಸಿ. ಅವರ ಮಾರ್ಗದರ್ಶನದಲ್ಲಿ “ರಾಜಕೀಯ ಸಿದ್ಧಾಂತ ಮತ್ತು ರಾಜಕಾರಣ: ಕರ್ನಾಟಕ ರಾಜಕಾರಣದ ಸ್ಥಿತ್ಯಂತರಗಳ ಅಧ್ಯಯನ (1947–2000)” ಎಂಬ ವಿಷಯದ ಕುರಿತು ಅವರು ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು.

ಸೀಮಾ ಕೌಸರ್ ಅವರ ಸಂಶೋಧನಾ ಮಹಾಪ್ರಬಂಧವನ್ನು ಪರಿಗಣಿಸಿದ ತುಮಕೂರು ವಿಶ್ವವಿದ್ಯಾಲಯವು ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.

ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.