Headlines

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

Screenshot 2026 08 19 12 17 54 907 com.openai.chatgpt edit

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

Shikaripura bandh called by VHP and Bajrang Dal over alleged attack on Bajrang Dal activists. Shops remain closed while vehicle and bus movement continues normally.

ಶಿಕಾರಿಪುರ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಇಂದು ಶಿಕಾರಿಪುರ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ವಾಹನ ಸಂಚಾರ ಮಾತ್ರ ಎಂದಿನಂತೆ ಮುಂದುವರಿದಿದೆ.

ಬೆಳಿಗ್ಗೆ ಕ್ಯಾಂಟೀನ್, ಟೀ ಶಾಪ್‌ಗಳು ಸೇರಿದಂತೆ ಕೆಲವು ಅಂಗಡಿಗಳು ಎಂದಿನಂತೆ ತೆರೆದಿದ್ದವು. ಗ್ರಾಹಕರು ಕೂಡ ಬಂದು ಹೋಗುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು, ಶಾಲಾ-ಕಾಲೇಜು ವಾಹನಗಳು ಸೇರಿದಂತೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಆದರೆ ಪ್ರಮುಖ ರಸ್ತೆಗಳಲ್ಲಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ತೆರೆದಿದ್ದ ಕೆಲವು ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡಿಸುತ್ತಿರುವುದು ಕಂಡುಬಂದಿದೆ.

ಬಂದ್ ಹಿನ್ನೆಲೆಯಲ್ಲಿ ಶಿಕಾರಿಪುರದ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಸಂಘಟನೆಗಳು ಯೋಜಿಸಿವೆ. ಮೆರವಣಿಗೆಯು ಶಿರಾಳಕೊಪ್ಪ ಸರ್ಕಲ್‌ (ಅಕ್ಕಮಹಾದೇವಿ ಸರ್ಕಲ್‌)ವರೆಗೆ ಸಾಗಲಿದ್ದು, ಬಳಿಕ ಅಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.

ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಆಗಸ್ಟ್ 16ರ ರಾತ್ರಿ ಕಳ್ಳರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡು ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು ಕಾರಿನಲ್ಲಿ ಕಳ್ಳರ ವಾಹನವನ್ನು ಹಿಂಬಾಲಿಸಿದ್ದರು. ಈ ವೇಳೆ ಮಾರ್ಗಮಧ್ಯೆ ಮತ್ತೊಂದು ವಾಹನದಿಂದ ಕಾರ್ಯಕರ್ತರ ಕಾರಿಗೆ ಡಿಕ್ಕಿ ಹೊಡೆಸಿದ ಆರೋಪಿತರು, ಬಳಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವು ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿವೆ.

ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿಕಾರಿಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳು, ಸರ್ಕಲ್‌ಗಳು, ಬಸ್ ನಿಲ್ದಾಣ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.