Headlines

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

Screenshot 2026 08 31 17 03 14 239 com.openai.chatgpt edit

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

A tragic incident in Shivamogga as a Class 9 student allegedly died by suicide. Tunganagar police have registered a case and are investigating after recovering a note.

ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ. ಆಕೆ ನಗರದ ರಾಮಕೃಷ್ಣ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ರಾಯರ ಆರಾಧನೆ ಹಿನ್ನೆಲೆಯಲ್ಲಿ ಪೋಷಕರು ಇಬ್ಬರು ಮಕ್ಕಳನ್ನು ಕರೆದುಕೊಂಡು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸೃಷ್ಟಿ ಮನೆಯಲ್ಲೇ ಉಳಿದಿದ್ದಳು. ಪೋಷಕರು ಮನೆಗೆ ಹಿಂದಿರುಗುವಷ್ಟರಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಸೃಷ್ಟಿ ಡೆತ್ ನೋಟ್ ಬರೆದಿಟ್ಟು ಹೋಗಿದ್ದಾಳೆ ಎನ್ನಲಾಗಿದ್ದು, ಪೋಷಕರು ತಮ್ಮ ಮೇಲೆ ಅತಿಯಾದ ಓದಿನ ಒತ್ತಡ ಹೇರುತ್ತಿದ್ದರು ಹಾಗೂ ತಮ್ಮನ್ನು ಮನೆಯಲ್ಲೇ ಬಿಟ್ಟು ದೇವಸ್ಥಾನಕ್ಕೆ ತೆರಳಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ತುಂಗಾನಗರ ಪೊಲೀಸರು ಡೆತ್ ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.