ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

Shivamogga district administration bans bike rallies, colour paper blasting, firecrackers and DJ systems from August 25 to 28 ahead of Eid Milad celebrations to maintain peace and law and order.

ಶಿವಮೊಗ್ಗ, ಆ. 25: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹಲವು ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 26ರಂದು ಈದ್ ಮಿಲಾದ್ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ 28ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 35(3)ರಡಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದಕ್ಕೂ ನಿಷೇಧ ಹೇರಲಾಗಿದೆ. ಇಂತಹ ಚಟುವಟಿಕೆಗಳಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 35 ಮತ್ತು 36ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದರ ಜೊತೆಗೆ, ಆಗಸ್ಟ್ 25ರಿಂದ 28ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನೂ ನಿಷೇಧಿಸಲಾಗಿದೆ. ಡಿಜೆ ಸಿಸ್ಟಂನಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ವಯಸ್ಕರು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಆಚರಿಸುವ ಉದ್ದೇಶದಿಂದ ಜಿಲ್ಲಾಡಳಿತ ಈ ನಿರ್ಬಂಧಗಳನ್ನು ಜಾರಿಗೊಳಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago