ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ
Shivamogga Tunganaagar police arrested three accused in a robbery case at Harekere Ring Road and recovered ₹30,500 cash, two mobile phones and an Innova car.
ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಇಬ್ಬರು ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ದರೋಡೆ ಮಾಡಿದ್ದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಕಾರಿನಲ್ಲಿ ಬಂದಿದ್ದ ಆರೋಪಿಗಳು ಇಬ್ಬರು ಸಾರ್ವಜನಿಕರನ್ನು ಬೆದರಿಸಿ ಹಾಗೂ ಹಲ್ಲೆ ನಡೆಸಿ, ಅವರ ಬಳಿಯಿದ್ದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ತರು ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆ ಹಾಗೂ ದರೋಡೆ ಮಾಡಿದ್ದ ಮಾಲು ವಶಪಡಿಸಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಿತ್ತು.
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜೆ. ಕಾರಿಯಪ್ಪ ಹಾಗೂ ಶಿವಮೊಗ್ಗ-ಎ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ತೀಲವಂತ ಎಸ್.ಎಚ್. ಅವರ ಮಾರ್ಗದರ್ಶನದಲ್ಲಿ, ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗುರುರಾಜ್ ಕೆ.ಟಿ. ಅವರ ನೇತೃತ್ವದಲ್ಲಿ ತನಿಖೆ ಮುಂದುವರಿಸಲಾಯಿತು.
ಪಿಎಸ್‌ಐಗಳಾದ ಗಾದಿಲಿಂಗಪ್ಪ ಗೌಡರ್ ಮತ್ತು ರಘುವೀರ್, ಸಿಹೆಚ್‌ಸಿ ಶ್ಯಾಮ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವಪ್ಪನವರ್, ಪ್ರಶಾಂತ ಕುಮಾರ್, ಅಬ್ದುಲ್ ಖಾದರ್ ಜಿಲಾನಿ, ಪ್ರವೀಣ್ ಹಾಗೂ ಎಎಚ್‌ಸಿ ಪುನೀತ್ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿತು.
ತನಿಖೆಯ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಮಾನ್ (24), ಅಣ್ಣಾನಗರ, ಶಿವಮೊಗ್ಗ; ಮೊಹಮ್ಮದ್ ಶೆಹಜಾನ್ (22), ಅಶೋಕನಗರ, ಶಿವಮೊಗ್ಗ; ಹಾಗೂ ಹೇಮಂತ ಎಸ್.ಎ. (21), ಗೋಪಿ ಸರ್ಕಲ್, ಶಿವಮೊಗ್ಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸಾರ್ವಜನಿಕರಿಂದ ಕಿತ್ತುಕೊಂಡಿದ್ದ ₹30,500 ನಗದು ಹಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…