ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

A 22-year-old youth died on the spot after a Honda City car crashed into a tree and split into three pieces near Harige on the outskirts of Shivamogga. Police have registered a case and launched an investigation.

ಶಿವಮೊಗ್ಗ, ಆ.4: ಶಿವಮೊಗ್ಗ ಹೊರವಲಯದ ಹರಿಗೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾಗಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಮೃತರನ್ನು ಶಿವಮೊಗ್ಗದ ಸಿಗೇಹಟ್ಟಿ ನಿವಾಸಿ ಗುರುರಾಜ್ (22) ಎಂದು ಗುರುತಿಸಲಾಗಿದೆ. ಗುರುರಾಜ್ ಅವರು ಹೊಂಡಾ ಸಿಟಿ ಕಾರಿನಲ್ಲಿ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ವೇಳೆ, ಹರಿಗೆ ಮತ್ತು ಮಲವಗೊಪ್ಪ ಗ್ರಾಮದ ಮಧ್ಯೆ ಇಂದು ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡು ಮೂರು ಭಾಗಗಳಾಗಿ ಚಿಂದಿಯಾಗಿದ್ದು, ಚಾಲಕ ಗುರುರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆ ಕುರಿತು ಸಂಚಾರಿ ಪೊಲೀಸ್ ಠಾಣೆಯ ಪಿಐ ದೇವರಾಜ್ ಮಾಹಿತಿ ನೀಡಿ, ಕಾರು ಅತಿವೇಗದಲ್ಲಿ ಚಲಿಸುತ್ತಿದ್ದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಮೃತ ಗುರುರಾಜ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಅವರು ಚಲಾಯಿಸುತ್ತಿದ್ದ ಹೊಂಡಾ ಸಿಟಿ ಕಾರು ಭಂಡಾರಿ ಗ್ಯಾಸ್ ಏಜೆನ್ಸಿಗೆ ಸೇರಿದ್ದು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಾರಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago