ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಭಾರೀ ಒಳಹರಿವು – ನದಿ ತೀರದ ಜನರಿಗೆ ಎಚ್ಚರಿಕೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಭಾರೀ ಒಳಹರಿವು – ನದಿ ತೀರದ ಜನರಿಗೆ ಎಚ್ಚರಿಕೆ

Heavy rainfall in Karnataka’s Malnad region has significantly increased inflow into the Tunga, Bhadra, and Linganamakki reservoirs in Shivamogga district. Authorities have warned people living along riverbanks to remain alert.

ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಿದೆ. ಮಳೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಾ ಜಲಾಶಯಕ್ಕೆ 84 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು
ಇಂದು ಬೆಳಿಗ್ಗೆ ಲಭ್ಯವಾದ ಮಾಹಿತಿಯಂತೆ, ತುಂಗಾ ಜಲಾಶಯದ ಗರಿಷ್ಠ ನೀರಿನ ಮಟ್ಟ (FRL) 588.24 ಮೀಟರ್ ಆಗಿದ್ದು, ಪ್ರಸ್ತುತ 587.36 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಟ್ಟು 2.755 ಟಿಎಂಸಿ ನೀರು ಇದ್ದು, ಜೀವಂತ ಸಂಗ್ರಹ 1.926 ಟಿಎಂಸಿ ಆಗಿದೆ.

ಜಲಾಶಯಕ್ಕೆ ಒಟ್ಟು 84,223 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅದರಲ್ಲಿ 82,503 ಕ್ಯೂಸೆಕ್ ನದಿಯಿಂದಲೇ ಒಳಹರಿವು ದಾಖಲಾಗಿದೆ. ಜಲಾಶಯದಿಂದ 72,460 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 588.17 ಮೀಟರ್ ಇದ್ದು, ಒಳಹರಿವು 17,401 ಕ್ಯೂಸೆಕ್ ಹಾಗೂ ಹೊರಹರಿವು 15,215 ಕ್ಯೂಸೆಕ್ ಆಗಿತ್ತು.


ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 2,158 ಅಡಿ ಆಗಿದ್ದು, ಇಂದು ಬೆಳಿಗ್ಗೆ 6 ಗಂಟೆಗೆ ನೀರಿನ ಮಟ್ಟ 2,132.25 ಅಡಿ ದಾಖಲಾಗಿದೆ. ಜಲಾಶಯದಲ್ಲಿ 43.147 ಟಿಎಂಸಿ ನೀರು ಸಂಗ್ರಹವಾಗಿದೆ.

ಜಲಾಶಯಕ್ಕೆ 31,874 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೇವಲ 185 ಕ್ಯೂಸೆಕ್ ನೀರನ್ನು ಮಾತ್ರ ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 180 ಅಡಿ 5 ಇಂಚು ಇದ್ದು, 64.692 ಟಿಎಂಸಿ ನೀರು ಸಂಗ್ರಹವಾಗಿತ್ತು.


ಲಿಂಗನಮಕ್ಕಿ ಜಲಾಶಯದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ನೀರಿನ ಮಟ್ಟ 1,781.85 ಅಡಿ ದಾಖಲಾಗಿದೆ. ಜಲಾಶಯಕ್ಕೆ 77,580 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಪ್ರಸ್ತುತ 2,066 ಕ್ಯೂಸೆಕ್ ನೀರನ್ನು ಮಾತ್ರ ಸ್ಲೂಯಿಸ್ ಮೂಲಕ ಹೊರಬಿಡಲಾಗುತ್ತಿದೆ.

ಜಲಾಶಯದಲ್ಲಿ 57.81 ಟಿಎಂಸಿ ಜೀವಂತ ನೀರಿನ ಸಂಗ್ರಹವಿದ್ದು, ಇದು ಒಟ್ಟು ಸಾಮರ್ಥ್ಯದ 38.13 ಶೇಕಡಾ ಆಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 127.25 ಟಿಎಂಸಿ (83.92%) ಜೀವಂತ ನೀರು ಸಂಗ್ರಹವಾಗಿತ್ತು.

ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಲಾಶಯಗಳಿಗೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago