ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him.

ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಮೃತೆಯ ಕುಟುಂಬದ ದೂರಿನ ಮೇರೆಗೆ ಪತಿ ವಿರುದ್ಧ ಮಾನಸಿಕ ಕಿರುಕುಳ ಆರೋಪದಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮೃತೆಯನ್ನು ನಂದಿನಿ (24) ಎಂದು ಗುರುತಿಸಲಾಗಿದೆ. ಅವರು ಮೂಲತಃ ಶಿವಮೊಗ್ಗದ ಶರಾವತಿ ನಗರದ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಶಿಕಾರಿಪುರ ಮೂಲದ ಸ್ಟೀವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು.

ಮದುವೆಯ ನಂತರ ದಂಪತಿ ನಾಲ್ಕು ವರ್ಷ ಶಿಕಾರಿಪುರದಲ್ಲಿ ವಾಸವಿದ್ದು, ಬಳಿಕ ಉದ್ಯೋಗದ ನಿಮಿತ್ತ ಶಿವಮೊಗ್ಗಕ್ಕೆ ಬಂದು ನೆಲೆಸಿದ್ದರು.
ಸ್ಟೀವನ್ ನಗರದ ಎನ್.ಟಿ. ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ನಂದಿನಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತೆಯ ಕುಟುಂಬದ ಆರೋಪದ ಪ್ರಕಾರ, ಮದುವೆಯಾದ ನಂತರದಿಂದಲೇ ಸ್ಟೀವನ್ ಪತ್ನಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. “ಅಡುಗೆ ಸರಿಯಾಗಿ ಮಾಡುವುದಿಲ್ಲ”, “ನೀನು ನನಗೆ ಬೇಡ”, “ನಿನ್ನ ತಂದೆ ಮದುವೆಯಲ್ಲಿ ಏನೂ ಕೊಟ್ಟಿಲ್ಲ” ಎಂಬ ಮಾತುಗಳ ಮೂಲಕ ಅವಮಾನಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿದ್ದು, ಇದೇ ಮಾನಸಿಕ ಕಿರುಕುಳದಿಂದ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತೆಯ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪತಿ ಸ್ಟೀವನ್ ವಿರುದ್ಧ ಪ್ರಕರಣ ದಾಖಲಿಸಿರುವ ದೊಡ್ಡಪೇಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಂಧನಕ್ಕಾಗಿ ವಿಶೇಷ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

9 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

11 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

12 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago