w
Headlines
Home » ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

Screenshot 2026 08 22 18 16 53 146 com.picsart.studio edit

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

A bike rider was seriously injured after a monkey suddenly attacked him near Kashipur Gate in Shivamogga. Locals have urged the Forest Department to capture the monkey and ensure public safety.

ಶಿವಮೊಗ್ಗ: ಬೈಕ್‌ನಲ್ಲಿ ತೆರಳಲು ಸಿದ್ಧರಾಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮುಸಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕಾಶಿಪುರ ಗೇಟ್ ಬಳಿ ನಡೆದಿದೆ.

ದಾಳಿಯಲ್ಲಿ ಕುಮಾರ್ ನಾಯ್ಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಕಾಶಿಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಮುಸಿಯು ಸಾರ್ವಜನಿಕವಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮುಸಿಯ ದಾಳಿಯಿಂದ ಮತ್ತಷ್ಟು ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಅದನ್ನು ಸೆರೆಹಿಡಿಯಬೇಕು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.