w
Headlines
Home » ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

Screenshot 2026 08 10 20 22 30 952 com.openai.chatgpt edit

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes.

ಶಿವಮೊಗ್ಗ: ಮಳೆಯಿಂದಾಗಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕಣಬೂರು ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ₹50 ಸಾವಿರ ಮೌಲ್ಯದ ಗಾಂಜಾ, ಎರಡು ಬೈಕ್‌ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಕಣಬೂರು ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ಪೊಲೀಸರು ತಪಾಸಣೆ ನಡೆಸಿದಾಗ, ಅವರ ಬ್ಯಾಗ್‌ನಲ್ಲಿ ಗಾಂಜಾ ಹೂ, ಮೊಗ್ಗು ಹಾಗೂ ಸೊಪ್ಪು ಪತ್ತೆಯಾಗಿದೆ.
ವಿಚಾರಣೆ ವೇಳೆ ಆರೋಪಿಗಳು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಕಡಿಮೆ ಬೆಲೆಗೆ ಗಾಂಜಾ ನೀಡಿದ್ದು, ಅದನ್ನು ತಂದು ಇಲ್ಲಿ ಮಾರಾಟ ಮಾಡುತ್ತಿದ್ದುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‌ಗಳಲ್ಲಿ ಬಂದಿದ್ದ ಆರೋಪಿಗಳು ಮಳೆಯ ಕಾರಣಕ್ಕೆ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಗಾಂಜಾ ಹಾಗೂ ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಎನ್.ಆರ್.ಪುರ ಪೊಲೀಸ್ ಠಾಣಾಧಿಕಾರಿ ನೂತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾಗರಾಜ್, ಸಿಬ್ಬಂದಿಗಳಾದ ಮಧು, ಕೌಸಿಕ್, ಚಂದ್ರು, ಪರಮೇಶ್ ಹಾಗೂ ಕಾಂತೇಜ್ ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.