ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು
Shivamogga burglary: 943 grams of gold jewellery, silver items, ₹7.86 lakh cash and other valuables worth around ₹71.42 lakh stolen from a PDO family’s rented house in Vidyanagar.
ಶಿವಮೊಗ್ಗ: ನಗರದ ವಿದ್ಯಾನಗರ 4ನೇ ಅಡ್ಡರಸ್ತೆಯಲ್ಲಿರುವ ಪಿಡಿಒ ಕುಟುಂಬ ವಾಸವಿದ್ದ ಬಾಡಿಗೆ ಮನೆಯಲ್ಲಿ ಭರ್ಜರಿ ಕಳ್ಳತನ ನಡೆದಿದ್ದು, 943 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ವಸ್ತುಗಳು, 7.86 ಲಕ್ಷ ರೂ. ನಗದು, 15 ಕೈಗಡಿಯಾರಗಳು ಹಾಗೂ ದೇವರ ಮೂರ್ತಿ ಸೇರಿದಂತೆ ಒಟ್ಟು ಸುಮಾರು 71.42 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿವೆ.
ವಿದ್ಯಾನಗರ ನಿವಾಸಿ ಹಾಗೂ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಟರಾಜ್ ಕೆ.ಎನ್. (55) ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಟರಾಜ್ ಕೆ.ಎನ್. ಹಾಗೂ ಅವರ ಪತ್ನಿ ಇಬ್ಬರೂ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕುಟುಂಬ ಸಮೇತ ವಿದ್ಯಾನಗರದ 4ನೇ ಅಡ್ಡರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.ಆಗಸ್ಟ್ 28ರಂದು ಬೆಳಗ್ಗೆ ಸುಮಾರು 11.15ಕ್ಕೆ ದಂಪತಿ ಮನೆಗೆ ಬೀಗ ಹಾಕಿಕೊಂಡು ಕರ್ತವ್ಯಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಪುತ್ರಿ ವೈಷವಿ ದೂರವಾಣಿ ಮೂಲಕ ಕರೆ ಮಾಡಿ ಮನೆಯಲ್ಲಿ ಕಳ್ಳತನವಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ತಕ್ಷಣ ಮನೆಗೆ ಹಿಂದಿರುಗಿದ ದಂಪತಿ ಪರಿಶೀಲಿಸಿದಾಗ, ಮನೆಯ ಮುಖ್ಯ ಬಾಗಿಲಿನ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ. ಬಳಿಕ ಬೆಡ್‌ರೂಮ್‌ನಲ್ಲಿದ್ದ ಗಾಡ್ರೆಜ್ ಬೀರುವಿನ ಬೀಗ ಒಡೆದು ಅದರಲ್ಲಿದ್ದ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ದೂರಿನಲ್ಲಿ ಒಟ್ಟು 943 ಗ್ರಾಂ ತೂಕದ ವಿವಿಧ ಬಗೆಯ ಚಿನ್ನಾಭರಣಗಳು ಕಳುವಾಗಿರುವುದಾಗಿ ತಿಳಿಸಲಾಗಿದೆ. ಚಿನ್ನದ ಸರಗಳು, ನೆಕ್ಲೆಸ್‌ಗಳು, ಬಳೆಗಳು, ಉಂಗುರಗಳು, ಕಿವಿಯೋಲೆಗಳು, ಹ್ಯಾಂಗಿಂಗ್ಸ್, ಪೆಂಡೆಂಟ್ ಹೊಂದಿರುವ ಸರ, ಲಕ್ಷ್ಮಿ ತಾಳಿ, ಚಿನ್ನದ ಗೊಂಬೆಗಳು ಹಾಗೂ ಚಿನ್ನದ ಗಟ್ಟಿ ಸೇರಿದಂತೆ ಹಲವು ವಸ್ತುಗಳು ಕಳುವಾಗಿವೆ.
ಇದರ ಜೊತೆಗೆ ಸುಮಾರು 500 ಗ್ರಾಂ ಬೆಳ್ಳಿ ವಸ್ತುಗಳು, 7.86 ಲಕ್ಷ ರೂ. ನಗದು, 15 ಕೈಗಡಿಯಾರಗಳು ಹಾಗೂ ದೇವರ ಮೂರ್ತಿ ಸೇರಿದಂತೆ ಇತರೆ ವಸ್ತುಗಳೂ ಕಳ್ಳತನವಾಗಿವೆ.
ಘಟನೆಗೆ ಸಂಬಂಧಿಸಿದಂತೆ ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…
ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…
ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…
ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…
ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…