ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

Shivamogga police have registered POCSO and Atrocities Act cases against a PU college principal following a minor student’s complaint alleging harassment and inappropriate conduct.

ಶಿವಮೊಗ್ಗ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಪಿಯು ಕಾಲೇಜೊಂದರ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ನಗರದ ಕಾಲೇಜೊಂದರ ಪ್ರಾಂಶುಪಾಲ ರವಿಕುಮಾರ್ ಆರೋಪಿಯಾಗಿದ್ದಾರೆ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಕುಟುಂಬದ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಜುಲೈ 18ರಂದು ಕಾಲೇಜಿಗೆ ತೆರಳಿರಲಿಲ್ಲ. ಜುಲೈ 20ರಂದು ಕೂಡ ಕಾಲೇಜಿಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ಜುಲೈ 21ರಂದು ಕಾಲೇಜಿಗೆ ತೆರಳಿದಾಗ, ಪ್ರಾಂಶುಪಾಲರು ತನ್ನೊಂದಿಗೆ ಹಾಗೂ ಇತರ ಕೆಲವು ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತರಗತಿಯಲ್ಲಿ ಇತರ ವಿದ್ಯಾರ್ಥಿಗಳ ಮುಂದೆ ಮುಜುಗರ ಉಂಟಾಗುವ ರೀತಿಯಲ್ಲಿ ವೈಯಕ್ತಿಕ ವಿಚಾರಗಳ ಕುರಿತು ಮಾತನಾಡಿದ್ದರು ಎನ್ನಲಾಗಿದ್ದು, ಈ ಹಿಂದೆ ಕಾಲೇಜಿನ ಕಾರು ಪಾರ್ಕಿಂಗ್ ಪ್ರದೇಶದಲ್ಲಿ ಕೈಕುಲುಕುವುದು, ಹೆಗಲ ಮೇಲೆ ಕೈ ಹಾಕುವುದು ಹಾಗೂ ಸೊಂಟಕ್ಕೆ ಕೈ ಹಾಕುವುದು ಸೇರಿದಂತೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಾಂಶುಪಾಲರ ಇಂತಹ ವರ್ತನೆ ಪ್ರಥಮ ಪಿಯುಸಿಯಿಂದಲೇ ಮುಂದುವರಿದಿತ್ತು ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಆಗಸ್ಟ್ 18ರಂದು ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆಯಲಾಗಿದ್ದು, ಅದರ ಆಧಾರದ ಮೇಲೆ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ಸಮಿತಿಯೂ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪರಿಶೀಲನೆಯ ಬಳಿಕ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

10 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

10 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

14 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

16 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

17 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago