POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

Screenshot 2026 08 21 16 09 10 726 com.picsart.studio edit

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

Shivamogga rural police arrested two accused for allegedly robbing a farmer at knifepoint near Kommanalu on Savalanga Road and stealing cash and a gold bracelet.

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿಕೊಂಡಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಮ್ಮನಾಳು ಗ್ರಾಮದ ಲಿಖಿತ್ ಹಾಗೂ ಬಿಕ್ಕೋನಹಳ್ಳಿಯ ದೀಪು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸನಗರ ತಾಲೂಕಿನ ಮತ್ತಲಿ ಜಡ್ಡು ಗ್ರಾಮದ ರೈತ ಆರ್. ಸುಭಾಷ್ ಅವರು ದರೋಡೆಗೊಳಗಾದವರು. ಆ.14ರ ರಾತ್ರಿ ಸುಭಾಷ್ ಅವರು ತಮ್ಮ ಸ್ವಂತ ಕೆಲಸದ ನಿಮಿತ್ತ ಕಾರಿನಲ್ಲಿ ಸವಳಂಗಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯ ಬಳಿ ಕಾರು ನಿಲ್ಲಿಸಿ ಮೂತ್ರವಿಸರ್ಜನೆಗೆ ತೆರಳಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಇಬ್ಬರು ಆರೋಪಿಗಳು ಚಾಕು ತೋರಿಸಿ ಬೆದರಿಸಿ ಸುಭಾಷ್ ಅವರಿಂದ ₹2 ಸಾವಿರ ನಗದು ಹಾಗೂ ಸುಮಾರು ₹90 ಸಾವಿರ ಮೌಲ್ಯದ 6 ಗ್ರಾಂ ತೂಕದ ಚಿನ್ನದ ಬ್ರಾಸ್‌ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.