ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ
Mother and three children jump into Tunga River in Shivamogga amid family dispute; mother and infant rescued, search continues for two missing girls.
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ ನಡೆದಿದೆ.
ನದಿಗೆ ಹಾರಿದ ತಾಯಿ ಹಾಗೂ 11 ತಿಂಗಳ ಗಂಡು ಮಗುವನ್ನು ಸ್ಥಳದಲ್ಲಿದ್ದ ನವೀನ್ ಹಾಗೂ ದಾದಾಪೀರ್ ಎಂಬ ಯುವಕರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಆದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ತೇಲಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಕ್ಕೆ ಮುಂದಾದರು. ಆದರೆ, ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತೊಂದರೆಯಾಯಿತು.
ಚಿತ್ರದುರ್ಗ ಮೂಲದ ಭವಾನಿ ಎಂಬ ಮಹಿಳೆ ತಮ್ಮ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಮಹಿಳೆ ಹಾಗೂ ರಕ್ಷಿಸಲ್ಪಟ್ಟ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬವು ಪ್ರಸ್ತುತ ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ ವಾಸವಾಗಿತ್ತು ಎನ್ನಲಾಗಿದೆ.
ಸ್ಥಳಕ್ಕೆ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಯಿ ಮತ್ತು ಮಗುವನ್ನು ರಕ್ಷಿಸಿದ ದಾದಾಪೀರ್ ಮಾತನಾಡಿ, ರೈಲ್ವೆ ಸೇತುವೆಯಿಂದ ಮಹಿಳೆಯೊಬ್ಬರು ಮೂವರು ಮಕ್ಕಳನ್ನು ಹಿಡಿದುಕೊಂಡು ನದಿಗೆ ಹಾರಿದ್ದನ್ನು ಗಮನಿಸಿದ ತಕ್ಷಣ ತಾವು ಹಾಗೂ ನವೀನ್ ನದಿಗೆ ಹಾರಿ ತಾಯಿ ಮತ್ತು ಒಂದು ಮಗುವನ್ನು ರಕ್ಷಿಸಿದ್ದಾಗಿ ತಿಳಿಸಿದ್ದಾರೆ. ಆದರೆ, ಉಳಿದ ಇಬ್ಬರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ನದಿಗೆ ಹಾರಿ ಇಬ್ಬರು ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತುಂಗಾ ನದಿ ತಟದಲ್ಲಿ ಜಮಾಯಿಸಿ ಮಕ್ಕಳಿಗಾಗಿ ಶೋಧ ನಡೆಸುತ್ತಿದ್ದಾರೆ. ನದಿಯ ದಡ, ತಿರುವುಗಳು ಹಾಗೂ ನೀರಿನ ಹರಿವಿನ ಪ್ರದೇಶಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ಮುಂದುವರಿದಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…