ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

Miscreants allegedly set two parked bikes on fire late at night in Venkatesh Nagar, Shivamogga, creating panic among local residents.

ಶಿವಮೊಗ್ಗ: ನಗರದ ವೆಂಕಟೇಶ ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

ವೆಂಕಟೇಶ ನಗರದ ಚಾನೆಲ್ ಏರಿಯಾ ಸಮೀಪದ 6ನೇ ತಿರುವಿನ 1ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಬೈಕ್‌ಗಳನ್ನು ದುಷ್ಕರ್ಮಿಗಳು ಗುರಿಯಾಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ತಡರಾತ್ರಿ ಸುಮಾರು 2 ಗಂಟೆಯ ವೇಳೆಗೆ ಸ್ಥಳಕ್ಕೆ ಬಂದ ಕಿಡಿಗೇಡಿಗಳು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿಗೆ ಆಹುತಿಯಾದ ಬೈಕ್‌ಗಳು ಸ್ಥಳೀಯ ನಿವಾಸಿ ಅಂತೋನಿ ರಾಜ್ ಅವರಿಗೆ ಸೇರಿವೆ ಎಂದು ಹೇಳಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿದ ಪರಿಣಾಮ ಎರಡೂ ವಾಹನಗಳ ಹಲವು ಭಾಗಗಳು ಸುಟ್ಟು ಹಾನಿಗೊಳಗಾಗಿವೆ.

ತಡರಾತ್ರಿ ನಡೆದ ಈ ಕೃತ್ಯದಿಂದ ವೆಂಕಟೇಶ ನಗರ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮೂಡಿದೆ. ಬೈಕ್‌ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಶೀಘ್ರ ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

51 minutes ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

2 hours ago

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು!

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a…

3 hours ago

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

21 hours ago

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…

22 hours ago