ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

A 55-year-old man died on the spot after a head-on collision between a Nano car and an i20 near Umblebailu on the outskirts of Shivamogga. Tunganagar Police have registered a case and started an investigation.

ಶಿವಮೊಗ್ಗ, ಆ.2: ನಗರದ ಹೊರವಲಯದ ಉಂಬ್ಳೇಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ನ್ಯಾನೋ ಕಾರು ಹಾಗೂ ಐ20 ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನ್ಯಾನೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಉಂಬ್ಳೇಬೈಲು ಮರಾಠಿ ಕ್ಯಾಂಪ್ ಸಮೀಪ ಉಂಬ್ಳೇಬೈಲು ಕಡೆಯಿಂದ ಜಂಕ್ಷನ್ ಕಡೆಗೆ ಚಲಿಸುತ್ತಿದ್ದ ನ್ಯಾನೋ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ರಸ್ತೆಯಲ್ಲಿ ಬಲಭಾಗಕ್ಕೆ ತಿರುವು ಪಡೆಯುವ ವೇಳೆ ಎದುರಿನಿಂದ ಬರುತ್ತಿದ್ದ ಐ20 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಉಂಬ್ಳೇಬೈಲು ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಅವರ ಸಹೋದರ ವಿಜೇಂದ್ರ (55) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಐ20 ಕಾರಿಗೂ ಹಾನಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

9 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

11 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

12 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago