w
Headlines
Home » ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

IMG 20260825 WA0022

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

Two accused persons were arrested near Siddaramatti in Shivamogga district for allegedly selling ganja illegally. Police seized 627 grams of ganja worth ₹31,350.

ಶಿವಮೊಗ್ಗ: ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದನೇರಳೆಕೆರೆ ಸಿದ್ದರಮಟ್ಟಿ ಸಮೀಪ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಶಿಲ್ಪಾ ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.

ಈ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಅಭಿಶೇಕ್ ನಾಯಕ್ ಅಲಿಯಾಸ್ ಅಭಿ ಹಾಗೂ ಆರೀಫ್ ಉಲ್ಲಾ ಅಲಿಯಾಸ್ ತೌಸಿಫ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಒಟ್ಟು 627 ಗ್ರಾಂ ತೂಕದ, ಅಂದಾಜು ₹31,350 ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.