ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು
SSLC student Krishna drowned while swimming in Tunga Channel near Abbalagere, Shivamogga. Fire and rescue teams continue search operations with help from locals.
ಶಿವಮೊಗ್ಗ: ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಸಂದರ್ಭದಲ್ಲಿ ತುಂಗಾ ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಶಿವಮೊಗ್ಗ ನಗರದ ಅಬ್ಬಲಗೆರೆ ಸಮೀಪದ ಈಶ್ವರ ವನದ ಎದುರು ಇಂದು ಸಂಜೆ ನಡೆದಿದೆ.
ನೀರುಪಾಲಾದ ವಿದ್ಯಾರ್ಥಿಯನ್ನು ಬೊಮ್ಮನಕಟ್ಟೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸ್ಥಳೀಯರೂ ಶೋಧ ಕಾರ್ಯಕ್ಕೆ ನೆರವಾಗುತ್ತಿದ್ದಾರೆ.
ಗೋಪಾಳದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆರು ವಿದ್ಯಾರ್ಥಿಗಳು ಈದ್ ಮಿಲಾದ್ ರಜೆ ಹಿನ್ನೆಲೆಯಲ್ಲಿ ಬೊಮ್ಮನಕಟ್ಟೆಯಿಂದ ಅಬ್ಬಲಗೆರೆ ಸಮೀಪ ಹರಿಯುವ ತುಂಗಾ ಚಾನೆಲ್‌ಗೆ ಈಜಲು ತೆರಳಿದ್ದರು ಎನ್ನಲಾಗಿದೆ.
ಆರು ವಿದ್ಯಾರ್ಥಿಗಳ ಪೈಕಿ ಇಬ್ಬರು ಮೊದಲು ಬಟ್ಟೆ ಬಿಚ್ಚಿ ನೀರಿಗೆ ಇಳಿದಿದ್ದಾರೆ. ಆದರೆ ಚಾನೆಲ್‌ನಲ್ಲಿ ನೀರಿನ ರಭಸ ಹೆಚ್ಚಾಗಿದ್ದರಿಂದ ಇಬ್ಬರಿಗೂ ಈಜಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಇಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಎತ್ತಿನ ಹಗ್ಗವೊಂದನ್ನು ವಿದ್ಯಾರ್ಥಿಗಳತ್ತ ಎಸೆದಿದ್ದಾರೆ.
ಹಗ್ಗ ಹಿಡಿದ ಓರ್ವ ವಿದ್ಯಾರ್ಥಿಯನ್ನು ಸ್ಥಳೀಯರು ಸುರಕ್ಷಿತವಾಗಿ ದಡಕ್ಕೆ ಎಳೆದು ತಂದಿದ್ದಾರೆ. ಆದರೆ ಮತ್ತೊಬ್ಬ ವಿದ್ಯಾರ್ಥಿ ಕೃಷ್ಣನಿಗೆ ಎಸೆದ ಹಗ್ಗ ಕೈಗೆ ಸಿಗಲಿಲ್ಲ. ಬಳಿಕ ಆತ ಸಮೀಪದಲ್ಲಿದ್ದ ವಿದ್ಯುತ್ ಕಂಬವನ್ನು ಹಿಡಿಯಲು ಮುಂದಾದಾಗ, ಕಂಬಕ್ಕೆ ಸುತ್ತಿದ್ದ ಹೂವಿನ ದಾರ ಕೈಗೆ ಸಿಕ್ಕಿದೆ. ಅದನ್ನು ಹಿಡಿದುಕೊಂಡರೂ ನೀರಿನ ರಭಸ ಹೆಚ್ಚಾಗಿದ್ದರಿಂದ ವಿದ್ಯಾರ್ಥಿ ಮತ್ತೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾನೆ.
ಸುಮಾರು 100ರಿಂದ 150 ಅಡಿ ದೂರದವರೆಗೆ ಸ್ಥಳೀಯರು ವಿದ್ಯಾರ್ಥಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಸದ್ಯ ಕೃಷ್ಣನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…