ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

Farmer from Thirthahalli loses ₹12.50 lakh after falling for a fake loan advertisement on YouTube. Cyber crime police have registered a case and begun investigation.

ತೀರ್ಥಹಳ್ಳಿ: ಯೂಟ್ಯೂಬ್‌ನಲ್ಲಿ ಪ್ರಸಾರವಾದ ಸಾಲ ನೀಡುವ ಜಾಹೀರಾತನ್ನು ನಂಬಿದ ತೀರ್ಥಹಳ್ಳಿಯ ರೈತರೊಬ್ಬರು ಬರೋಬ್ಬರಿ ₹12.50 ಲಕ್ಷ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 2ರಂದು ದೂರುದಾರರು ಯೂಟ್ಯೂಬ್ ವೀಕ್ಷಿಸುತ್ತಿದ್ದಾಗ ‘ಕಾವೇರಿ ಲೋನ್ ಸರ್ವೀಸ್’ ಹಾಗೂ ‘ಧನಿ ಫೈನಾನ್ಸ್’ ಹೆಸರಿನಲ್ಲಿ ಸಾಲ ನೀಡುವುದಾಗಿ ಜಾಹೀರಾತು ಕಾಣಿಸಿಕೊಂಡಿದೆ. ಸಾಲದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಜಾಹೀರಾತಿನಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ವಿವಿಧ ಮೊಬೈಲ್ ಸಂಖ್ಯೆಗಳ ಮೂಲಕ ವಾಟ್ಸಾಪ್‌ನಲ್ಲಿ ಸಂಪರ್ಕಿಸಲಾಗಿದೆ.

ವಂಚಕರು ಸಾಲ ನೀಡುವುದಾಗಿ ನಂಬಿಸಿ ಪ್ರೊಸೆಸಿಂಗ್ ಫೀ, ತೆರಿಗೆ ಹಾಗೂ ಸರ್ವಿಸ್ ಚಾರ್ಜ್ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಜುಲೈ 14ರಂದು ಸಾಲ ಮಂಜೂರಾಗಿದೆ ಎಂದು ತೋರಿಸುವ ನಕಲಿ ಅಗ್ರಿಮೆಂಟ್ ಪ್ರತಿಯನ್ನೂ ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನು ನಂಬಿದ ರೈತರು ಜೂನ್ 2ರಿಂದ ಆಗಸ್ಟ್ 6ರವರೆಗೆ ವಂಚಕರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹12,50,078 ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಆದರೆ ಹಣ ವರ್ಗಾವಣೆ ಮಾಡಿದ ಬಳಿಕವೂ ಸಾಲದ ಮೊತ್ತ ನೀಡದೆ, ಮತ್ತೆ ಹಣ ಪಾವತಿಸುವಂತೆ ಆರೋಪಿಗಳು ಸೂಚಿಸಿದ್ದಾರೆ. ಇದರಿಂದ ಅನುಮಾನಗೊಂಡ ದೂರುದಾರರು ಪರಿಚಯಸ್ಥರಲ್ಲಿ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.

ಕಾವೇರಿ ಲೋನ್ ಸರ್ವೀಸ್ ಹಾಗೂ ಧನಿ ಫೈನಾನ್ಸ್ ಹೆಸರಿನಲ್ಲಿ ನಂಬಿಸಿ ₹12.50 ಲಕ್ಷ ವಂಚಿಸಿರುವ ಆರೋಪಿಗಳನ್ನು ಪತ್ತೆಹಚ್ಚಿ, ಹಣವನ್ನು ವಾಪಸ್ ಕೊಡಿಸುವಂತೆ ದೂರುದಾರರು ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

2 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

3 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

3 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago