ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents.

ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ ಕೆಲವು ಮನೆಗಳಿಗೂ ಹಾನಿಯಾಗಿದೆ. ಗುಡ್ಡ ಕುಸಿತದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತಪಟ್ಟವರು ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಬಂದವರಾಗಿದ್ದರು. ಗುಡ್ಡ ಕುಸಿತದಿಂದ ಹಾನಿಗೊಳಗಾದ ಪ್ರದೇಶದಲ್ಲಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಈಗಾಗಲೇ ನೋಟಿಸ್ ನೀಡಲಾಗಿದೆ. ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಂತ್ರಸ್ತರು ಇದೇ ಪ್ರದೇಶದಲ್ಲಿ ಮತ್ತೆ ವಾಸಿಸಲು ಸಾಧ್ಯವಿಲ್ಲ. ಅವರಿಗೆ ನಿವೇಶನ ಒದಗಿಸುವುದರ ಜೊತೆಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಹೆಚ್ಚಿನ ನೆರವು ಕೊಡಿಸುವ ಪ್ರಯತ್ನ ಮಾಡಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರದ ಬಗ್ಗೆ ಚರ್ಚಿಸುವುದಾಗಿ ಸಚಿವರು ತಿಳಿಸಿದರು.

ಸಂತ್ರಸ್ತ ಕುಟುಂಬಗಳಿಗೆ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. ಜೊತೆಗೆ ಸ್ಥಳೀಯ ಯುವಕರು ಕೂಡ ₹5 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ. ಸದ್ಯಕ್ಕೆ ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸಿಸಲು ಅಗತ್ಯವಿರುವ ಬಾಡಿಗೆ ಹಣವನ್ನು ನೀಡುವ ಬಗ್ಗೆಯೂ ಪ್ರಯತ್ನಿಸಲಾಗುತ್ತಿದೆ ಎಂದರು.

ಹುಲಿಕಲ್ ಘಾಟಿ ಕುಸಿತ: ಎಫ್‌ಐಆರ್ ದಾಖಲಿಸಲು ಸೂಚನೆ

ತೀರ್ಥಹಳ್ಳಿ ಭೂಕುಸಿತ ಪ್ರಕರಣದ ಎಫ್‌ಐಆರ್ ಹಾಗೂ ಹುಲಿಕಲ್ ಘಾಟಿ ಕುಸಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗದಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹುಲಿಕಲ್ ಘಾಟಿಗೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದ್ದೆ ಎಂದು ಹೇಳಿದರು.

ಇಂತಹ ಘಟನೆಗಳಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಈ ವಿಚಾರವನ್ನು ಅಧಿಕಾರಿಗಳ ಸಭೆಯಲ್ಲಿ ಮತ್ತೆ ಚರ್ಚಿಸಿ, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡುತ್ತೇನೆ. ಕಾನೂನುಬದ್ಧವಾಗಿ ಯಾರ ವಿರುದ್ಧ ಪ್ರಕರಣ ದಾಖಲಿಸಬೇಕೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಫ್‌ಐಆರ್ ದಾಖಲಿಸಲು ಇಷ್ಟು ದಿನ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚಿಸುವುದಾಗಿ ಮಧು ಬಂಗಾರಪ್ಪ ತಿಳಿಸಿದರು.

ಹೊಸ ಸಚಿವರಿಗೆ ಖಾತೆ ಹಂಚಿಕೆ: ನಾಳೆ ನಿರ್ಧಾರ

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಮಾತನಾಡಿದ ಮಧು ಬಂಗಾರಪ್ಪ, ಯಾವುದೇ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು.

“ಶಾಲೆಗೆ ಸೇರುತ್ತೇನೋ, ಕಾಲೇಜಿಗೆ ಸೇರುತ್ತೇನೋ ಗೊತ್ತಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಶಾಲೆಯಲ್ಲಿ ಈಗಾಗಲೇ ಶೇ.99 ಅಂಕ ಪಡೆದು ತೇರ್ಗಡೆಯಾಗಿದ್ದೇನೆ. ನಾಳೆ ಎಲ್ಲವೂ ತೀರ್ಮಾನವಾಗಲಿದೆ,” ಎಂದು ಅವರು ಹಾಸ್ಯಮಿಶ್ರಿತವಾಗಿ ಪ್ರತಿಕ್ರಿಯಿಸಿದರು.

ಈ ಕುರಿತು ಮುಖ್ಯಮಂತ್ರಿ ಈಗಾಗಲೇ ದೆಹಲಿಗೆ ಪ್ರವಾಸ ಕೈಗೊಂಡಿದ್ದು, ಅಲ್ಲಿಂದಲೇ ಖಾತೆ ಹಂಚಿಕೆ ಸೇರಿದಂತೆ ಮುಂದಿನ ಎಲ್ಲಾ ತೀರ್ಮಾನಗಳು ನಡೆಯಲಿವೆ ಎಂದು ಸಚಿವರು ಹೇಳಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

7 hours ago

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…

7 hours ago

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga…

7 hours ago

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

11 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

13 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

13 hours ago