POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

Screenshot 2026 08 22 18 37 24 798 com.openai.chatgpt edit

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

Tourist bus and fish transport goods vehicle collide near Bilalukoppa on the Thirthahalli-MegaraValli road. No casualties or serious injuries reported.

ತೀರ್ಥಹಳ್ಳಿ: ತೀರ್ಥಹಳ್ಳಿ–ಮೇಗರವಳ್ಳಿ ಮಾರ್ಗದ ರಂಜದಕಟ್ಟೆ ಸಮೀಪದ ಬಿಳಲುಕೊಪ್ಪ ಬಳಿ ಪ್ರವಾಸಿ ಬಸ್ ಹಾಗೂ ಮೀನಿನ ಸಾಗಾಟದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಮಾಹಿತಿಯ ಪ್ರಕಾರ, ತಿರುಪತಿಗೆ ತೆರಳುತ್ತಿದ್ದ ಪ್ರವಾಸಿ ಬಸ್‌ವೊಂದು ಬಿಳಲುಕೊಪ್ಪದ ಟೀ ಕ್ಯಾಂಟೀನ್‌ವೊಂದರ ಬಳಿ ಚಹಾ ಕುಡಿಯಲು ರಸ್ತೆಬದಿಯಲ್ಲಿ ನಿಂತಿತ್ತು. ಈ ವೇಳೆ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಮೀನಿನ ಸಾಗಾಟದ ಗೂಡ್ಸ್ ವಾಹನವು ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರಯಾಣಿಕರು ಹಾಗೂ ಗೂಡ್ಸ್ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಪಘಾತದ ವೇಳೆ ಬಸ್‌ನಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.