ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ
Tourist bus and fish transport goods vehicle collide near Bilalukoppa on the Thirthahalli-MegaraValli road. No casualties or serious injuries reported.
ತೀರ್ಥಹಳ್ಳಿ: ತೀರ್ಥಹಳ್ಳಿ–ಮೇಗರವಳ್ಳಿ ಮಾರ್ಗದ ರಂಜದಕಟ್ಟೆ ಸಮೀಪದ ಬಿಳಲುಕೊಪ್ಪ ಬಳಿ ಪ್ರವಾಸಿ ಬಸ್ ಹಾಗೂ ಮೀನಿನ ಸಾಗಾಟದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ತಿರುಪತಿಗೆ ತೆರಳುತ್ತಿದ್ದ ಪ್ರವಾಸಿ ಬಸ್‌ವೊಂದು ಬಿಳಲುಕೊಪ್ಪದ ಟೀ ಕ್ಯಾಂಟೀನ್‌ವೊಂದರ ಬಳಿ ಚಹಾ ಕುಡಿಯಲು ರಸ್ತೆಬದಿಯಲ್ಲಿ ನಿಂತಿತ್ತು. ಈ ವೇಳೆ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಮೀನಿನ ಸಾಗಾಟದ ಗೂಡ್ಸ್ ವಾಹನವು ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರಯಾಣಿಕರು ಹಾಗೂ ಗೂಡ್ಸ್ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ವೇಳೆ ಬಸ್‌ನಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…