w
Headlines
Home » ಆನಂದಪುರ ಬಳಿ ಭೀಕರ ಬೈಕ್ ಅಪಘಾತ – ಬೈಕ್ ಸವಾರ ಸಾವು

ಆನಂದಪುರ ಬಳಿ ಭೀಕರ ಬೈಕ್ ಅಪಘಾತ – ಬೈಕ್ ಸವಾರ ಸಾವು

Screenshot 2026 09 22 10 13 02 068 com.openai.chatgpt edit

ಆನಂದಪುರ ಬಳಿ ಭೀಕರ ಬೈಕ್ ಅಪಘಾತ – ಬೈಕ್ ರ್ರ್ ಸಾವು |A fatal road accident occurred on the Anandapur-Shikaripura State Highway near Dasakoppa in Sagara taluk, where a bike rider died after a collision between two motorcycles.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಆನಂದಪುರ–ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಗ್ರಾಮದ ಮಸೀದಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ರಭಸಕ್ಕೆ ದಾಸಕೊಪ್ಪ ಗ್ರಾಮದ ನಿವಾಸಿ ಮೊಹಮ್ಮದ್ ಸಿದ್ದಿಕ್ ಅವರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುವಿನ ನೆರವಿಗೆ ಧಾವಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಿಕ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇtಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಎರಡೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸ್ಥಳ ಮಹಜರು ನಡೆಸಲಾಗಿದೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.