ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
One-month skill development training on bakery product preparation will be conducted at the College of Agriculture, Navule, Shivamogga from September 23 to October 22, 2026. Applications are invited from interested candidates.
ಶಿವಮೊಗ್ಗ, ಸೆ.16: ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಸೆಪ್ಟೆಂಬರ್ 23ರಿಂದ ಅಕ್ಟೋಬರ್ 22, 2026ರವರೆಗೆ ತರಬೇತಿ ನಡೆಯಲಿದ್ದು, ವಿವಿಧ ಬಗೆಯ ಬಿಸ್ಕತ್ತು, ಕುಕೀಸ್, ಕೇಕ್, ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ ಸೇರಿದಂತೆ ಹಲವು ಬೇಕರಿ ಉತ್ಪನ್ನಗಳ ತಯಾರಿಕೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಯಲ್ಲಿ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕೀಸ್, ಮಸಾಲ ಬಿಸ್ಕತ್ತು, ಪೀನಟ್ ಕುಕೀಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಕಲಿಸಲಾಗುತ್ತದೆ.
ತರಬೇತಿಗೆ ರೂ.4,500 ಶುಲ್ಕ ನಿಗದಿಪಡಿಸಲಾಗಿದೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
ಆಸಕ್ತರು ಸೆಪ್ಟೆಂಬರ್ 22, 2026ರೊಳಗೆ ತರಬೇತಿ ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. – 9449187763 ಅಥವಾ ಜಯಶಂಕರ್ – 9686555897 ಅವರನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಬಹುದು ಎಂದು ನವುಲೆ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…