w
Headlines
Home » ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

Screenshot 2026 09 04 20 19 00 574 com.openai.chatgpt edit

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ

MLA Beluru Gopalakrishna emphasized the importance of children’s educational progress during the Eid Milad celebrations held in Ripponpete.

ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು.

ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಬದಲಾವಣೆ ತರಬೇಕು ,ಮುಸಲ್ಮಾನರ ಮಕ್ಕಳೆಂದರೇ ಕೇವಲ ಪಂಚರ್ ಅಂಗಡಿ , ಗುಜುರಿ ಅಂಗಡಿ ಇಡುತ್ತಾರೆ ಎನ್ನುವುದು ಬದಲಾಗಲಿ ಉತ್ತಮ ಶಿಕ್ಷಣ ನೀಡಿ ನಿಮ್ಮಲ್ಲೂ ಐಪಿಎಸ್ ,ಐಎಎಸ್ ಮಾಡುವಂತಾಗಬೇಕು ಎಂದರು.

ನಾವೆಲ್ಲರೂ ಭಾರತೀಯರು ನಮ್ಮಲ್ಲಿ ಭೇಧ ಭಾವ ಬರಲೇ ಬಾರದು ,ತಮ್ಮ ತಮ್ಮ ಧರ್ಮವನ್ನು‌ ಆಚರಣೆ ಮಾಡುತ್ತಾ ಎಲ್ಲರನ್ನೂ ಗೌರವಿಸಬೇಕು,ನಾಡಿನಲ್ಲಿ ಕೆಲವರ ಸ್ವಾರ್ಥ ಹಿತಾಸಕ್ತಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಭಾರತದಲ್ಲಿ‌ ಪುರಾತನದಿಂದ ಹಿಡಿದು ಸ್ವಾತಂತ್ರ್ಯ ಹೋರಾಟದವರೆಗೂ ಸಹ ಎಂದಿಗೂ ಜಾತಿ-ಧರ್ಮದ ಹೆಸರಲ್ಲಿ ಸಂಘರ್ಷಗಳು ನಡೆದಿಲ್ಲ.ದ್ವೇಷ ಬಿಟ್ಟು ದೇಶ ಕಟ್ಟಬೇಕು. ವಿವೇಕದಿಂದ ವರ್ತಿಸಿ ಅವಿವೇಕತನವನ್ನು ತೊರೆಯಬೇಕು. ವಿಚಾರವಂತರಾಗಿ ವಿಕಾರತೆಯನ್ನು ತೊರೆಯಬೇಕೆಂದು ಹೇಳಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಮಾತನಾಡಿ ಮನುಕುಲಕ್ಕೆ ಶಾಂತಿ, ಮಾನವೀಯತೆಯನ್ನು ಕಲಿಸಿಕೊಟ್ಟ ಪ್ರವಾದಿಯವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಅನುಷ್ಠಾನಕ್ಕೆ ತರುವಂತಹ ಕೆಲಸ ಮಾಡಿದಾಗ ಮಾತ್ರ ಎಲ್ಲರೂ ಉತ್ತಮ ಹಾಗೂ ಸೌಹಾರ್ಧಯುತವಾಗಿ ಬದುಕಲು ಸಾಧ್ಯವಾಗುತ್ತದೆ , ನಾವು ಜೆಡಿಎಸ್ ಪಕ್ಷದಲ್ಲಿದ್ದರೂ ಕೂಡಾ ಸಾಗರ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದೇವು ಆದರೆ ಕೊನೆ ಕ್ಷಣದಲ್ಲಿ ಅದು ಕೈ ತಪ್ಪಿದೆ ಆದರೆ ಮುಂದೊಂದು ದಿನ ಅವರು ಸಚಿವರಾಗುವುದು ನಿಶ್ಚಿತ ಎಂದರು.

ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಅಮೀರ್ ಹಂಜಾ ಮಾತನಾಡಿ ಪ್ರತೀಯೊಬ್ಬ ನಾಗರಿಕನೂ ಅವರವರ ಧರ್ಮಕ್ಕನುಸಾರವಾಗಿ ಪರಸ್ಪರ ಪ್ರೀತಿಯಿಂದ ಬದುಕಿದರೆ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗಬಹುದು. ಮನುಷ್ಯರು ಮಾನವೀಯತೆಯಿಂದ ದೂರವಾಗುತ್ತಿದ್ದು ಪ್ರಾಣಿ, ಪಕ್ಷಿಗಳಿಂದ ನಾವು ಮಾನವೀಯತೆಯನ್ನು ಕಲಿಯಬೇಕಾದ ಸ್ಥಿತಿ ಎದುರಾಗಿದೆ. ದೇಶದ ಸಂವಿದಾನವನ್ನು ಪ್ರತೀಯೊಬ್ಬರು ಗೌರವಿಸಬೇಕು, ಕಾನೂನಿಗೆ ಗೌರವ ಕೊಡುವ ವ್ಯಕ್ತಿಗಳು ನಾವಾದರೆ ಎಲ್ಲ ಕಡೆಯೂ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಡಿಪಿ ಸದಸ್ಯ ಆಸೀಫ಼್ ಭಾಷಾ ನಮ್ಮ ಸಮುದಾಯವು ಶೈಕ್ಷಣಿಕ ,ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ದಿ ಹೊಂದುತಿದ್ದು ಈ ಭಾಗದ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಫಲಿತಾಂಶ ತರುತಿದ್ದು ,ಕ್ರೀಡಾ ಕ್ಷೇತ್ರದಲ್ಲೂ ಸಮುದಾಯದ ಯುವಕರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಹಾಗೂ ಪಟ್ಟಣದ ಮುಸ್ಲಿಂ ಬಾಂಧವರ ಬಹುದಿನಗಳ ಬೇಡಿಕೆಯಾದ ಸಮುದಾಯ ಭವನವನ್ನು ನಿರ್ಮಿಸಲು ಶಾಸಕ ಬೇಳೂರು ಗೋಪಾಲಕೃಷ್ಣ ಈಗಾಗಲೇ ಅನುದಾನವನ್ನು ಮಂಜೂರು ಮಾಡಿಸಿದ್ದು ಕಟ್ಟಡ ಕಾಮಗಾರಿ ಅರ್ಧ ಮುಗಿದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡುವ ಭರವಸೆ ನೀಡಿದ್ದಾರೆ ಅವರಿಗೆ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ವಹಿಸಿದ್ದರು.

ಈ ಸಂಧರ್ಭದಲ್ಲಿ SSLC ಹಾಗೂ PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.

ಈ ಸಂಧರ್ಭದಲ್ಲಿ ಧರ್ಮಗುರು ತಾಜುದ್ದೀನ್ ತಂಗಳ್ ಅಲ್ ಬುಖಾರಿ , ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ , ಈದ್ ಮಿಲಾದ್ ಸಮಿತಿ ಅಧ್ಯಕ್ಷ ಇಸ್ಮಾಯಿಲ್ , ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯ ನಿರೂಪ್‌ಕುಮಾರ್ , ಅಫ಼್ಜಲ್ ಬ್ಯಾರಿ , ಶೇಖಬ್ಬಾ ಹಾಗೂ ಇನ್ನಿತರರು ಇದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.